ಪ್ಲಸ್‌ವನ್ ವಿದ್ಯಾರ್ಥಿಗಳಿಗೆ ಹಲ್ಲೆ: ಪ್ಲಸ್ ಟು ವಿದ್ಯಾರ್ಥಿಗಳ ವಿರುದ್ಧ ಕೇಸು

ಕಾಸರಗೋಡು: ಮೊಗ್ರಾಲ್ ಪುತ್ತೂರು ಸರಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಪ್ಲಸ್‌ವನ್ ವಿದ್ಯಾರ್ಥಿಗಳಿಗೆ ಹಲ್ಲೆಗೈದುದಾಗಿ ದೂರಲಾಗಿದೆ. ಈ ಬಗ್ಗೆ ಪ್ರಾಂಶುಪಾಲ ನೀಡಿದ ದೂರಿನಂತೆ ಪ್ಲಸ್ ಟು ವಿದ್ಯಾರ್ಥಿಗಳಾದ 5 ಮಂದಿ ವಿರುದ್ಧ ಕಾಸರಗೋಡು ನಗರ ಠಾಣೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ಜೂನ್ 25ರಿಂದ 27ರ ಮಧ್ಯೆಗಿನ ದಿನಗಳಲ್ಲಿ  ಶಾಲೆಯಲ್ಲಿ ಹಾಗೂ ಹೊರಗೆ ಹಲ್ಲೆಗೈದುದಾಗಿ ದೂರಲಾಗಿದೆ. ಪ್ಲಸ್‌ವನ್ ವಿದ್ಯಾರ್ಥಿಗಳಾದ ಮೂರು ಮಂದಿಗೆ ಹಿರಿಯ ವಿದ್ಯಾರ್ಥಿಗಳು ಹಲ್ಲೆಗೈದಿದ್ದಾರೆ. ಈ ಬಗ್ಗೆ ವಿದ್ಯಾರ್ಥಿಗಳು ತಿಳಿಸಿದ ಹಿನ್ನೆಲೆಯಲ್ಲಿ ಪ್ರಾಂಶುಪಾಲ ಪೊಲೀಸರಿಗೆ ದೂರು ನೀಡಿದ್ದಾರೆ.

Leave a Reply

Your email address will not be published. Required fields are marked *

You cannot copy content of this page