ಬಂದೂಕು ತೋರಿಸಿ ಯುವತಿಗೆ ಲೈಂಗಿಕ ದೌರ್ಜನ್ಯ: ಯುವಕನ ವಿರುದ್ಧ ಕೇಸು
ಕಾಸರಗೋಡು: ವಿವಾಹಿತಳಾದ ಯುವತಿಗೆ ಬಂದೂಕು ತೋರಿಸಿ ಬೆದರಿಕೆಯೊಡ್ಡಿ ನಿರಂತರ ಲೈಂಗಿಕ ದೌರ್ಜನ್ಯಗೈದ ಬಗ್ಗೆ ದೂರಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಚಾಲ ಫಿರೋಸ್ ಎಂಬಾತನ ವಿರುದ್ಧ ಕಾಸರಗೋಡು ಮಹಿಳಾ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿಯಾದ ೩೧ರ ಹರೆಯದ ವಿವಾದಿತ ಯುವತಿ ನೀಡಿದ ದೂರಿನಂತೆ ಈ ಕೇಸು ದಾಖಲಿಸಲಾಗಿದೆ. ೨೦೧೯ರಿಂದ ೨೦೨೨ ಸೆಪ್ಟಂಬರ್ ೮ರವರೆಗೆ ವಿವಿಧ ದಿನಗಳಲ್ಲಿ ಯುವತಿಯ ಮನೆಗೆ ತಲುಪಿದ ಆರೋಪಿ ಬಂದೂಕು ತೋರಿಸಿ ಲೈಂಗಿಕ ದೌರ್ಜನ್ಯವೆಸಗಿದ್ದಾನೆಂದು ಯುವತಿ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಯುವತಿ ಪೊಲೀಸರಿಗೆ ದೂರು ನೀಡಿರುವುದನ್ನು ತಿಳಿದ ಆರೋಪಿ ಇದೀಗ ತಲೆಮರೆಸಿಕೊಂಡಿದ್ದಾನೆ. ಈತನ ಪತ್ತೆಗಾಗಿ ಶೋಧ ನಡೆಯುತ್ತಿದೆಯೆಂದು ಪೊಲೀಸರು ತಿಳಿಸಿದ್ದಾರೆ.