ಬದಿಯಡ್ಕದಲ್ಲಿ ಕನ್ನಡ ಪತ್ರಿಕಾ ದಿನಾಚರಣೆ ಜು. 1ರಂದು

ಬದಿಯಡ್ಕ: ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಜಿಲ್ಲಾ ಘಟಕದ ನೇತೃತ್ವದಲ್ಲಿ ಶ್ರೀ ಭಾರತೀ ವಿದ್ಯಾಪೀಠ ಬದಿಯಡ್ಕ ಇದರ ಸಹಯೋಗದಲ್ಲಿ ಕನ್ನಡ ಪತ್ರಿಕಾ ದಿನಾಚರಣೆ ಜುಲೈ 1ರಂದು ಬೆಳಿಗ್ಗೆ 9.30ಕ್ಕೆ ಬದಿಯಡ್ಕ ಶ್ರೀ ಭಾರತೀ ವಿದ್ಯಾಪೀಠದಲ್ಲಿ ನಡೆಯಲಿದೆ. ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರವಿ ನಾಯ್ಕಾಪು ಅಧ್ಯಕ್ಷತೆ ವಹಿಸುವರು.

ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಸದಸ್ಯ ಎ.ಆರ್. ಸುಬ್ಬಯ್ಯಕಟ್ಟೆ  ಉದ್ಘಾಟಿಸುವರು. ಡಾ. ಬೇ.ಸಿ.ಗೋಪಾಲಕೃಷ್ಣ ಭಟ್ ಪತ್ರಿಕಾ ದಿನಾಚರಣೆ ಸಂದೇಶ ನೀಡುವರು. ಜಯಪ್ರಕಾಶ್ ಪಜಿಲ, ಸತ್ಯನಾರಾಯಣ ಶರ್ಮ, ಅಖಿಲೇಶ್ ನಗುಮುಗಂ, ಕೆ. ಗಂಗಾಧರ್, ಪುರುಷೋತ್ತಮ ಪೆರ್ಲ ಭಾಗವಹಿಸುವರು.

RELATED NEWS

You cannot copy contents of this page