ಬಸ್‌ನಲ್ಲಿ ಗಾಂಜಾ ಸಾಗಾಟ ಪ್ರಕರಣ: ಆರೋಪಿಗೆ ಎರಡು ವರ್ಷ ಸಜೆ, ಜುಲ್ಮಾನೆ
ಕಾಸರಗೋಡು: ಬಸ್ಸಿನಲ್ಲಿ ಗಾಂಜಾ ಸಾಗಿಸಿದ ಪ್ರಕರಣದ ಆರೋಪಿಗೆ ಕಾಸರಗೋಡು ಹೆಚ್ಚುವರಿ ಜಿಲ್ಲಾ ಸೆಶನ್ಸ್ ನ್ಯಾಯಾ ಲಯ (ದ್ವಿತೀಯ)ದ ನ್ಯಾಯಾಧೀಶೆ ಕೆ. ಪ್ರಿಯಾ ಎರಡು ವರ್ಷ ಕಠಿಣ ಸಜೆ ಹಾಗೂ 20,000 ರೂ. ಜುಲ್ಮಾನೆ ವಿಧಿಸಿ ತೀರ್ಪು ನೀಡಿದ್ದಾರೆ.
ಚೆರ್ಕಳ ಪೊವ್ವಲ್ ಮಾಸ್ತಿಕುಂಡ್ ಮುಬೀನಾ ಮಂಜಿಲ್‌ನ ಅಬೂಬ ಕರ್ ಸಿದ್ದಿಕ್ (37) ಎಂಬಾತನಿಗೆ ಈ ಶಿಕ್ಷೆ ವಿಧಿಸಲಾಗಿದೆ. ಜುಲ್ಮಾನೆ ಪಾವತಿಸದಿದ್ದಲ್ಲಿ ಆರೋಪಿ ಮೂರು ತಿಂಗಳ ಹೆಚ್ಚುವರಿ ಸಜೆ ಅನುಭವಿ ಸಬೇಕಾಗಿದೆಯೆಂದೂ ತೀರ್ಪಿನಲ್ಲಿ ತಿಳಿಸಲಾಗಿದೆ.
2019 ಅಗೋಸ್ತ್ 19ರಂದು ಸಂಜೆ ಮಂಜೇಶ್ವರ ತಪಾಸಣಾ ಕೇಂದ್ರ ದಲ್ಲಿ ಅಂದು ಎಕ್ಸೈಸ್ ಇನ್‌ಸ್ಪೆಕ್ಟರ್ ಆಗಿದ್ದ ಎಸ್.ಬಿ. ಮುರಳೀಧರನ್ ನೇತೃತ್ವದ ಅಬಕಾರಿ ತಂಡ ಆ ದಾರಿಯಾಗಿ ಮಂಗಳೂರಿನಿಂದ ಕಾಸರಗೋಡಿನತ್ತ ಬರುತ್ತಿದ್ದ ಕರ್ನಾಟಕ ಕೆಎಸ್‌ಆರ್‌ಟಿಸಿ ಬಸ್ಸಿನೊಳಗೆ ತಪಾಸಣೆ ನಡೆಸಿದಾಗ ಅದರಲ್ಲಿ ಪ್ರಯಾಣಿಸುತ್ತಿದ್ದ ಆರೋಪಿ ಅಬೂಬಕರ್ ಸಿದ್ದಿಕ್‌ನನ್ನು ಒಂದೂ ವರೆ ಕಿಲೋ ಗಾಂಜಾ ಸಹಿತ ಬಂಧಿಸಿದ್ದರು. ಆ ಪ್ರಕರಣದಲ್ಲಿ ಆರೋಪಿಗೆ ನ್ಯಾಯಾಲಯ ಈ ಶಿಕ್ಷೆ ವಿಧಿಸಿದೆ. ಅಂದು ಕುಂಬಳ ಎಕ್ಸೈಸ್ ಇನ್‌ಸ್ಪೆಕ್ಟರ್ ಆಗಿದ್ದು ಈಗ ಕಾಸರ ಗೋಡು ಎಕ್ಸೈಸ್ ಡೆಪ್ಯುಟಿ ಕಮಿಶನರ್ ಆಗಿರುವ ಜೋಯ್ ಜೋಸೆಫ್ ಈ ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯದಲ್ಲಿ ಚಾರ್ಜ್ ಶೀಟ್ ಸಲ್ಲಿಸಿದ್ದರು. ಪ್ರೋಸಿಕ್ಯೂಶನ್ ಪರವಾಗಿ ಹೆಚ್ಚುವರಿ ಸರಕಾರಿ ಪ್ಲೀಡರ್ ಚಂದ್ರಮೋಹನ್ ಜಿ ಮತ್ತು ನ್ಯಾ. ಚಿತ್ರಕಲಾ ನ್ಯಾಯಾಲಯದಲ್ಲಿ ವಾದಿಸಿದ್ದರು.