ಬಸ್‌ನಲ್ಲಿ ಬಾಲಕಿಗೆ ಕಿರುಕುಳ : ಆರೋಪಿಗೆ ೫ ವರ್ಷ ಕಠಿಣ ಸಜೆ

ಕಾಸರಗೋಡು:  ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ೧೩ರ ಹರೆಯದ ಬಾಲಕಿಗೆ ಕಿರುಕುಳ ನೀಡಿದ ಪ್ರಕರಣದ ಆರೋಪಿಗೆ ಕಾಸರಗೋಡು ಹೆಚ್ಚುವರಿ ಜಿಲ್ಲಾ ಸೆಶನ್ಸ್ ನ್ಯಾಯಾಲಯ (೧)ದ ನ್ಯಾಯಾಧೀಶರಾದ ಎ. ಮನೋಜ್ ಅವರು ಐದು ವರ್ಷ ಕಠಿಣ ಸಜೆ ಮತ್ತು ಒಂದೂವರೆ ಲಕ್ಷ ರೂ. ಜುಲ್ಮಾನೆ ವಿಧಿಸಿ ತೀರ್ಪು ನೀಡಿದ್ದಾರೆ.

ನೆಕ್ರಾಜೆ ಚಂದ್ರಂಪಾರ ನಿವಾಸಿ ಶಂಸುದ್ದೀನ್ (೫೩) ಎಂಬಾತನಿಗೆ ಈ ಶಿಕ್ಷೆ ವಿಧಿಸಲಾಗಿದೆ. ಜುಲ್ಮಾನೆ ಪಾವತಿಸದಿದ್ದಲ್ಲಿ ಆರೋಪಿ ಒಂದೂವರೆ ವರ್ಷ ಹೆಚ್ಚುವರಿ ಶಿಕ್ಷೆ ಅನುಭವಿಸಬೇಕಾಗಿದೆ ಎಂದೂ ತೀರ್ಪಿನಲ್ಲಿ ತಿಳಿಸಲಾಗಿದೆ.

೨೦೧೯ ಡಿಸೆಂಬರ್ ೫ರಂದು ಕಾಸರಗೋಡಿನಿಂದ ಮುಳ್ಳೇರಿಯಕ್ಕೆ ಪ್ರಯಾಣಿಸುತ್ತಿದ್ದ ವೇಳೆ ಬಸ್‌ನೊಳಗೆ ಬಾಲಕಿಗೆ ಕಿರುಕುಳ ನೀಡಿದ ದೂರಿನಂತೆ ವಿದ್ಯಾನಗರ ಪೊಲೀಸರು ಆರೋಪಿ ವಿರುದ್ಧ ಪೋಕ್ಸೋ ಕಾನೂನು ಪ್ರಕಾರ ಪ್ರಕರಣ ದಾಖಲಿಸಿಕೊಂಡಿದ್ದರು. ಅಂದು ವಿದ್ಯಾನಗರ ಪೊಲೀಸ್ ಠಾಣೆಯ ಎಸ್‌ಐ ಆಗಿದ್ದ ಯು.ಪಿ. ವಿಪಿನ್ ಈ ಬಗ್ಗೆ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರೋಸಿಕ್ಯೂಷನ್ ಪರ ಸ್ಪೆಷಲ್ ಪ್ರೋಸಿಕ್ಯೂಟರ್ ಪಿ.ಆರ್. ಪ್ರಕಾಶ್ ಅಮ್ಮಣ್ಣಾಯ ನ್ಯಾಯಾಲಯದಲ್ಲಿ ವಾದಿಸಿದ್ದರು.

RELATED NEWS

You cannot copy contents of this page