ಬಸ್-ಸ್ಕೂಟರ್ ಢಿಕ್ಕಿ ಇಬ್ಬರಿಗೆ ಗಂಭೀರ ಗಾಯ

ಕುಂಬಳೆ: ಬಸ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಸ್ಕೂಟರ್ ಸವಾರರಾದ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಸೋಂಕಾಲ್ ನಿವಾಸಿ ಇಬ್ರಾಹಿಂ ಖಲೀಲ್ (೨೧), ಮಣಿಮುಂಡ ಮುಹಮ್ಮದ್ ಮಾಹಸಿನ್ (೨೪) ಗಾಯಗೊಂಡವರು. ಇವರನ್ನು ಗಂಭೀರ ಗಾಯಗಳೊಂದಿಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿನ್ನೆ ರಾತ್ರಿ ೮ ಗಂಟೆಗೆ ನಾರಾಯಣಮಂಗಲದಲ್ಲಿ ಅಪಘಾತ ಸಂಭವಿಸಿದೆ. ಖಾಸಗಿ ಬಸ್ ನಾರಾಯಣಮಂಗಲದಲ್ಲಿ ಸ್ಕೂಟರ್‌ಗೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Leave a Reply

Your email address will not be published. Required fields are marked *

You cannot copy content of this page