ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ : ಆರೋಪಿಗೆ 54 ವರ್ಷ ಸಜೆ, ಜುಲ್ಮಾನೆ

ಕಾಸರಗೋಡು: ಅಪ್ರಾಪ್ತೆ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪೋಕ್ಸೋ ಪ್ರಕರಣದ ಆರೋಪಿಗೆ ಹೊಸದುರ್ಗ ಕ್ಷಿಪ್ರ ಸ್ಪೆಷಲ್ ನ್ಯಾಯಾಲಯದ ನ್ಯಾಯಾಧೀ ಶರಾದ ಸಿ. ಸುರೇಶ್ ಕುಮಾರ್ ಅವರು ವಿವಿಧ ಸೆಕ್ಷನ್‌ಗಳಲ್ಲಾಗಿ ಒಟ್ಟು 54 ವರ್ಷ ಸಜೆ ಹಾಗೂ 1.40 ಲಕ್ಷ ರೂ. ಜುಲ್ಮಾನೆ ವಿಧಿಸಿ ತೀರ್ಪು ನೀಡಿದ್ದಾರೆ.

ಚಿತ್ತಾರಿಕ್ಕಲ್ ಕಡುಮೇನಿಯ ಏಣಿಯಾಟ್ ಹೌಸ್‌ನ ಅಂಟೋ ಚಾಕೋಚ್ಚನ್ (28) ಎಂಬಾತನಿಗೆ ಈ ಶಿಕ್ಷೆ ವಿಧಿಸಲಾಗಿದೆ. ಜುಲ್ಮಾನೆ ಪಾವತಿಸದಿದ್ದಲ್ಲಿ ಆರೋಪಿ ಒಂದು ವರ್ಷ 4 ತಿಂಗಳ ಹೆಚ್ಚುವರಿ ಸಜೆ ಅನುಭವಿಸಬೇಕಾಗಿದೆ, ಮಾತ್ರವಲ್ಲ  ಶಿಕ್ಷೆಯನ್ನು ಒಟ್ಟಿಗೆ ಅನುಭವಿಸಿದರೆ ಸಾಕೆಂದೂ ತೀರ್ಪಿನಲ್ಲಿ ತಿಳಿಸಲಾಗಿದೆ.

2019 ಎಪ್ರಿಲ್ ತಿಂಗಳಲ್ಲಿ 14 ವರ್ಷದ ಬಾಲಕಿಯೋರ್ವಳನ್ನು ಹಲವು ದಿನಗಳೊಳಗಾಗಿ ಕಾರು ಮತ್ತು ಮನೆಯಲ್ಲಿ ಲೈಂಗಿಕ ಕಿರುಕುಳ ನೀಡಿರುವುದಾಗಿ ಆರೋಪಿಸಿ  ನೀಡಲಾದ ದೂರಿನಂತೆ  ಚಿತ್ತಾರಿಕ್ಕಲ್ ಪೊಲೀಸರು ಆರೋಪಿ ಆಂಟೋ ಚಾಕೋಚ್ಚಾನ್‌ನ ವಿರುದ್ಧ  ಪೋಕ್ಸೋ ಮತ್ತಿತರ ಕಾನೂನು ಪ್ರಕಾರ  ಪ್ರಕರಣ ದಾಖಲಿಸಿಕೊಂಡಿದ್ದರು. ಆ ಪ್ರಕರಣದಲ್ಲಿ ಆತನಿಗೆ ನ್ಯಾಯಾಲಯ ಈ ಶಿಕ್ಷೆ ವಿಧಿಸಿದೆ. ಅಂದು ಚಿತ್ತಾರಿಕ್ಕಲ್ ಪೊಲೀಸ್ ಠಾಣೆಯ ಎಸ್‌ಐ ಆಗಿದ್ದ ಕೆ.ಪಿ. ವಿನೋದ್ ಕುಮಾರ್ ಈ ಪ್ರಕರಣದ ತನಿಖೆ ನಡೆಸಿದ್ದರು. ಪ್ರೋಸಿಕ್ಯೂಶನ್ ಪರ ಪಬ್ಲಿಕ್ ಪ್ರೋಸಿಕ್ಯೂಟರ್ ಎ. ಗಂಗಾಧರನ್ ನ್ಯಾಯಾಲಯದಲ್ಲಿ ವಾದಿಸಿದ್ದರು.

RELATED NEWS

You cannot copy contents of this page