ಬಿಜೆಪಿ ಕುಂಬಳೆ ಪಂ. ಸಮಿತಿ ಅಭ್ಯಾಸವರ್ಗ ಕಾರ್ಯಾಗಾರ

ಕುಂಬಳೆ: ಬಿಜೆಪಿ ಕುಂಬಳೆ ಪಂಚಾಯತ್ ಸಮಿತಿ ವತಿಯಿಂದ ಇಲ್ಲಿನ ಸೇವಾ ಸಹಕಾರಿ ಬ್ಯಾಂಕ್ ಸಭಾಂಗಣದಲ್ಲಿ ಅಭ್ಯಾಸವರ್ಗ ಕಾರ್ಯಾಗಾರ ನಡೆಯಿತು. ಬಿಜೆಪಿ ಕುಂಬಳೆ ದಕ್ಷಿಣ ವಲಯ ಅಧ್ಯಕ್ಷ ಸುಜಿತ್ ರೈ ಅಧ್ಯಕ್ಷತೆ ವಹಿಸಿದರು. ಮಾಜಿ ಜಿಲ್ಲಾಧ್ಯಕ್ಷ ವಿ. ರವೀಂದ್ರನ್ ಉದ್ಘಾಟಿಸಿದರು. ಕಲ್ಲಿಕೋಟೆ ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ವಿ. ಸಜೀವನ್ ತರಬೇತಿ ನೀಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಆರ್. ಸುನಿಲ್, ರಾಜ್ಯ ಸಮಿತಿ ಮಾಜಿ ಸದಸ್ಯ ಕೋಳಾರ ಸತೀಶ್ಚಂದ್ರ ಭಂಡಾರಿ, ಜಿಲ್ಲಾ ಉಪಾಧ್ಯಕ್ಷ ಮುರಳೀಧರ ಯಾದವ್, ಕುಂಬಳೆ ಮಂಡಲ ಅಧ್ಯಕ್ಷ ಸುನಿಲ್ ಅನಂತಪುರ, ಉತ್ತರ ವಲಯ ಅಧ್ಯಕ್ಷ ಶಿವಪ್ರಸಾದ್ ರೈ ಮಡ್ವ ಸಹಿತ ಕಾರ್ಯಕರ್ತರು ಉಪಸ್ಥಿತರಿದ್ದರು. ಕುಂಬಳೆ ಸಮಿತಿ ಉಪಾಧ್ಯಕ್ಷೆ ಉಷಾ ಕುಮಾರಿ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ವಿವೇಕಾನಂದ ಶೆಟ್ಟಿ ವಂದಿಸಿದರು.

You cannot copy contents of this page