ಬಿಜೆಪಿ ಬದಿಯಡ್ಕ ಮಂಡಲ ತರಬೇತಿ ಕಾರ್ಯಾಗಾರ
ಬದಿಯಡ್ಕ: ಬಿಜೆಪಿ ಸದಸ್ಯತ್ವ ಅಭಿಯಾನದಂಗವಾಗಿ ಬದಿಯಡ್ಕ ಮಂಡಲ ಬಿಜೆಪಿ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮವನ್ನು ಬಿಜೆಪಿ ರಾಜ್ಯ ಸಮಿತಿ ಸದಸ್ಯ ಕೋಳಾರು ಸತೀಶ್ಚಂದ್ರ ಭಂಡಾರಿ ಉದ್ಘಾಟಿಸಿದರು. ಬದಿಯಡ್ಕ ಸಂಸ್ಕೃತಿ ಭವನದಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಮಂಡಲ ಅಧ್ಯಕ್ಷ ಗೋಪಾಲಕೃಷ್ಣ ಮುಂಡೋಳುಮೂಲೆ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಎಂ.ಸುಧಾಮ ಗೋಸಾಡ ಸದಸ್ಯತ್ವ ಅಭಿಯಾನದ ಬಗ್ಗೆ ತರಬೇತಿ ನೀಡಿದರು. ಎಂ. ಜನನಿ, ರಾಮಪ್ಪ ಮಂಜೇಶ್ವರ, ಜಿಲ್ಲಾ ಕಾರ್ಯದರ್ಶಿ ಸೌಮ್ಯ ಮಹೇಶ್, ರಾಜ್ಯ ಕಾರ್ಯಕಾರಣಿ ಸದಸ್ಯ ಶಿವಕೃಷ್ಣ ಭಟ್, ಎಸ್.ಟಿ. ಮೋರ್ಚಾ ಜಿಲ್ಲಾಧ್ಯಕ್ಷ ಈಶ್ವರಮಾಸ್ತರ್, ರೈತ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದು ಮಾಸ್ತರ್ ಮಾತನಾಡಿದರು. ಮಂಡಲದ ಪ್ರಧಾನ ಕಾರ್ಯದರ್ಶಿ ಪಿ.ಆರ್.ಸುನೀಲ್ ಸ್ವಾಗತಿಸಿ, ಮಧುಸೂದನ್ ಕೆಮ್ಮಂಗಯ್ಯ ವಂದಿಸಿದರು.