ಬೇಕೂರು ರಸ್ತೆಗೆ ಬಾಗಿಕೊಂಡಿರುವ ಮರದ ರೆಂಬೆಗಳು: ಅಪಾಯ ಭೀತಿ

ಉಪ್ಪಳ: ಕೈಕಂಬ-ಬಾಯಾರು ರಸ್ತೆಯ ಬೇಕೂರು ಶಾಲಾ ಪರಿಸರದ ಬಸ್ ನಿಲ್ದಾಣ ಸಮೀಪದಲ್ಲಿ ಬೃಹತ್ ಮರವೊಂದರ ರೆಂಬೆಗಳು ರಸ್ತೆಗೆ ಬಾಗಿಕೊಂಡಿದ್ದು, ಸಾರ್ವಜನಿಕರಲ್ಲಿ ಭೀತಿಗೆ ಕಾರಣವಾಗಿದೆ. ಬಸ್ ಸಹಿತ ದೊs್ಣu ವಾಹನಗಳು ಈ ರೆಂಬೆಗಳು ಬಡಿಯುತ್ತಿರುವುದಾಗಿ ದೂರಲಾಗಿದೆ. ಅಲ್ಲದೆ ದಿನನಿತ್ಯ ನೂರಾರು ವಾಹನ ಸಂಚಾರವಿರುವ ಈ ರಸ್ತೆಯಲ್ಲಿ ಶಾಲಾ ಮಕ್ಕಳ ಸಹಿತ ಜನರು ನಡೆದು ಹೋಗುತ್ತಿದ್ದಾರೆ. ಅಲ್ಲದೆ ಈ ಪರಿಸರ ದಿಂದ ವಿದ್ಯುತ್ ತಂತಿ ಹಾದು ಹೋಗಿದೆ. ಮರ ಮುರಿದು ಬಿದ್ದಲ್ಲಿ ದುರಂತ ಸಂಭವಿಸಬ ಹುದೆಂದು ಸಾರ್ವಜನಿಕರು ಅಭಿಪ್ರಾಯಪಟ್ಟಿದ್ದಾರೆ. ಕೈಕಂಬ-ಬಾಯಾರು ರಸ್ತೆ ಉದ್ದಕ್ಕೂ ಅಲ್ಲಲ್ಲಿ ಅಪಾಯಕ್ಕೆ ಕಾರಣವಾಗಿದ್ದ ಮರ ಸಹಿತ ರೆಂಬೆಗಳನ್ನು ಈ ಹಿಂದೆ ರಸ್ತೆ ನಿರ್ಮಾಣದ ವೇಳೆ ತೆರವುಗೊಳಿಸಲಾಗಿದೆ. ಉಳಿದಿರುವ ಈ ಮರದ ರೆಂಬೆಯನ್ನೂ ತೆರವುಗೊಳಿಸಲು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *

You cannot copy content of this page