ಮಂಗಲ್ಪಾಡಿ ಸೇವಾ ಸಹಕಾರಿ ಬ್ಯಾಂಕ್ ಶತಮಾನೋತ್ಸವ ಆಚರಣೆ ಕಟ್ಟಡ ಉದ್ಘಾಟನೆ ನ. 4ರಂದು

ಕುಂಬಳೆ: ಮಂಗಲ್ಪಾಡಿ ಸೇವಾ ಸಹಕಾರಿ ಬ್ಯಾಂಕ್‌ನ ಶತಮಾನೋತ್ಸವ ಸಮಾರಂಭ ಹಾಗೂ ನವೀಕೃತ ಕಟ್ಟಡದ ಉದ್ಘಾಟನೆ ನವೆಂಬರ್ 4 ರಂದು ಚೆರುಗೋಳಿಯಲ್ಲಿ ನಡೆಯಲಿದೆ ಎಂದು ಸಂಬAಧಪಟ್ಟವರು ಕುಂಬಳೆ ಪ್ರೆಸ್ ಪೋರಂನಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಅಂದು ಬೆಳಿಗ್ಗೆ 9.30ಕ್ಕೆ ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಕಟ್ಟಡ ಉದ್ಘಾಟಿಸುವರು. ಶಾಸಕ ಎ.ಕೆ.ಎಂ.ಅಶ್ರಫ್ ಅಧ್ಯಕ್ಷತೆ ವಹಿಸುವರು. ಸಹಕಾರ ಸದನವನ್ನು ಬಿಜೆಪಿ ರಾಜ್ಯಾ ಧ್ಯಕ್ಷ ಕೆ. ಸುರೇಂದ್ರನ್, ಬಡ್ಡಿ ರಹಿತ ಸಾಲ ಯೋಜನೆಯನ್ನು ಅಡಿಟ್ ವಿಭಾ ಗದ ಸಹ ನಿರ್ದೇಶಕ ರಾಮ ಉದ್ಘಾ ಟಿಸುವರು. ಸ್ಮರಣ ಸಂಚಿಕೆಯನ್ನು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಬಿಡುಗಡೆ ಗೊಳಿಸುವರು.
ಬ್ಯಾಂಕ್ ಅಧ್ಯಕ್ಷ ಪ್ರೇಮ್ ಕುಮಾರ್, ಮಂಗಲ್ಪಾಡಿ ಪಂಚಾಯತ್ ಅಧ್ಯಕ್ಷೆ ರುಬೀನಾ ನೌಫಲ್, ಬಿಜೆಪಿ ಜಿಲ್ಲಾಧ್ಯಕ್ಷ ರವೀಶ ತಂತ್ರಿ ಕುಂಟಾರು ಉಪಸ್ಥಿತರಿರುವರು. ಉದ್ಘಾಟನಾ ಸಮಾರಂಭದ ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. 100ನೇ ವರ್ಷಾಚರಣೆ ಸಂದರ್ಭದಲ್ಲಿ ನೂರು ಸದಸ್ಯರಿಗೆ ಗೃಹ ಪರಿಕರ ಖರೀದಿಗೆ 50 ಸಾವಿರ ರೂ.ಗಳ ಬಡ್ಡಿ ರಹಿತ ಸಾಲ ನೀಡಲಾಗುವುದು.
ಜೊತೆಗೆ ಹಿಂದಿನ ಅಧ್ಯಕ್ಷರನ್ನು ಸನ್ಮಾನಿಸಲಾಗುವುದು. ಉಪ್ಪಳ ಮತ್ತು ನಯಾಬಜಾರ್, ಬಂದ್ಯೋಡು ಎಂಬ ಮೂರು ಶಾಖೆಗಳು ಸಹಕಾರಿ ಬ್ಯಾಂಕಿನ ಅಡಿ ಕಾರ್ಯನಿರ್ವ ಹಿಸುತ್ತಿವೆ ಎಂದು ಸಂಬAಧಪಟ್ಟವರು ಮಾಹಿತಿ ನೀಡಿದರು.
ಬ್ಯಾಂಕ್ ಅಧ್ಯಕ್ಷ ಪ್ರೇಮಕುಮಾರ್ ಕೆ.ಪಿ.ಅರಿಯಾಳ, ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ, ನಿರ್ದೇಶಕರಾದ ಭರತ್ ರೈ, ರವೀಶ್ ಕೊಡಂಗೆ, ಕಾರ್ಯದರ್ಶಿ ಪಿ. ಬಾಲಸುಬ್ರಹ್ಮಣ್ಯ ಸುದ್ದಿ ಗೋಷ್ಠಿಯಲ್ಲಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *

You cannot copy content of this page