ಮಂಜೇಶ್ವರ: ಬಸ್ನಲ್ಲಿ ಸಾಗಿಸುತ್ತಿದ್ದ ಕರ್ನಾಟಕ ಮದ್ಯ ಪತ್ತೆ
ಮಂಜೇಶ್ವರ: ಮಂಜೇಶ್ವರ ಅಬಕಾರಿ ತಪಾಸಣಾ ಕೇಂದ್ರದಲ್ಲಿ ಅಬಕಾರಿ ತಂಡ ನಿನ್ನೆ ನಡೆಸಿದ ವಾಹನ ತಪಾಸಣೆ ವೇಳೆ ಮಂಗಳೂ ರಿನಿಂದ ಕಾಸರಗೋಡಿಗೆ ಬರುತ್ತಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ನಲ್ಲಿ ವಾರೀಸುದಾರರಿಲ್ಲದ 4.920 ಲೀಟರ್ (750 ಎಂ.ಎಲ್ನ 2 ಬಾಟಲಿ ಮತ್ತು 180 ಎಂ.ಎಲ್ನ 19 ಟೆಟ್ರಾ ಪ್ಯಾಕೆಟ್) ಕರ್ನಾಟಕ ಮದ್ಯ ಉಪೇಕ್ಷಿತ ಸ್ಥಿತಿಯಲ್ಲಿ ಪತ್ತೆಹಚ್ಚಲಾಗಿದೆ. ಎಕ್ಸೈಸ್ ಇನ್ಸ್ಪೆಕ್ಟರ್ ಎಬಿ ಥೋಮಸ್ ನೇತೃತ್ವದಲ್ಲಿ ಪ್ರಿವೆಂಟೀವ್ ಆಫೀಸರ್ ಸಿ.ಕೆ.ವಿ ಸುರೇಶ್, ಸಿಇಒಗಳಾದ ಅತುಲ್ ಮತ್ತು ಟಿ.ವಿ. ವಿನೋದ್ ಎಂಬವರನ್ನೊಳಗೊAಡ ತಂಡ ಈ ಕಾರ್ಯಾಚರಣೆ ನಡೆಸಿದೆ.
ಉಪೇಕ್ಷಿತ ಸ್ಥಿತಿಯಲ್ಲಿ ಮದ್ಯ ಪತ್ತೆ
ಇದೇ ರೀತಿ ಕಾಸರಗೋಡು ಅಬಕಾರಿ ರೇಂಜ್ ಕಚೇರಿಯ ಎಕ್ಸೈಸ್ ಇನ್ಸ್ಪೆಕ್ಟರ್ (ಗ್ರೇಡ್) ಜೋಸೆಫ್ ಜೆ ನೇತೃತ್ವದ ಅಬಕಾರಿ ತಂಡ ನಿನ್ನೆ ಕಾಸರಗೋಡು ನೆಲ್ಕಳದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಅಲ್ಲಿನ ಹಿತ್ತಿಲೊಂದರ ಬಳಿ ಉಪೇಕ್ಷಿತ ಸ್ಥಿತಿಯಲ್ಲಿ 7(180 ಎಂ.ಎಲ್ನ 43 ಪ್ಯಾಕೆಟ್) ಲೀಟರ್ ಕರ್ನಾಟಕ ಮದ್ಯ ಪತ್ತೆಹಚ್ಚಿ ಪ್ರಕರಣ ದಾಖಲಿಸಿಕೊಂಡಿದೆ.