ಮಂಜೇಶ್ವರ: ೧೭೬೬ನೇ ಮದ್ಯವರ್ಜನ ಶಿಬಿರ ಸಮಾರೋಪ
ಮಂಜೇಶ್ವರ: ಮಂಜೇಶ್ವರ ತಾಲೂಕಿನ ಬಂಗ್ರ ಮಂಜೇಶ್ವರ ಶ್ರೀ ವೀರಭದ್ರ ಮಹಾಮ್ಮಾಯಿ ದೇವಸ್ಥಾನದಲ್ಲಿ ೧೭೬೬ ನೇ ಮದ್ಯವರ್ಜನ ಶಿಬಿರದ ಕುಟುಂಬ ದಿನ ಹಾಗೂ ಸಮಾರೋಪ ಸಮಾರಂಭ ನಿನ್ನೆ ನೆರವೇರಿತು. ಕುಟುಂಬ ದಿನವನ್ನು ಜನಜಾಗ್ರತಿ ವೇದಿಕೆ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಸ್ ನೆರವೇರಿಸಿದರು. ೬೬ ಮಂದಿ ಶಿಬಿರಾರ್ಥಿ ಬಂಧುಗಳು ಹೊಸ ಜೀವನಕ್ಕೆ ಕಾಲಿಟ್ಟರು. ಸಮಾರೋಪ ಸಮಾರಂಭದÀಲ್ಲಿ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನವಿತ್ತರು. ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಶೆಟ್ಟಿ ಕಡಂಬಾರು ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ದ. ಕ. ಜಿಲ್ಲಾ ಜನಜಾಗ್ರತಿ ವೇದಿಕೆಯ ಅಧ್ಯಕ್ಷರಾದ ಪದ್ಮನಾಭ ಶೆಟ್ಟಿ, ದುಗ್ಗೆಗೌಡ, ಜನಜಾಗ್ರತಿ ವೇದಿಕೆಯ ನಿಕಟಪೂರ್ವ ಅಧ್ಯಕ್ಷ ಅಶ್ವಥ್ ಪೂಜಾರಿ ಲಾಲïಭಾಗ್, ಭಜನಾ ಪರಿಷತ್ ಅಧ್ಯಕ್ಷ ದಿನೇಶ್ ಚೆರುಗೊಳಿ, ಮಂಜೇಶ್ವರ ಪಂಚಾಯತ್ ಸದಸ್ಯ ಯಾದವ ಬಡಾಜೆ, ಮಜಿಬೈಲ್ ಒಕ್ಕೂಟದ ಅಧ್ಯಕ್ಷ ಭಾಸ್ಕರ ಭಂಡಾರಿ ಭಾಗವಹಿಸಿದರು. ಜಿಲ್ಲಾ ಜನಜಾಗ್ರತಿ ವೇದಿಕೆಯ ಅಧ್ಯಕ್ಷ ಡಾ. ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ, ನಿಕಟಪೂರ್ವ ಅಧ್ಯಕ್ಷ ಗೋಪಾಲ್ ಶೆಟ್ಟಿ ಅರಿಬೈಲ್, ಜಿಲ್ಲಾ ನಿರ್ದೇಶಕ ಪ್ರವೀಣ್ ಕುಮಾರ್, ವ್ಯವಸ್ಥಾಪನಾ ಸಮಿತಿಯ ಗೌರವಾದ್ಯಕ್ಷ ಹರಿಶ್ಚಂದ್ರ ಶೆಟ್ಟಿಗಾರ್, ಕೋಶಾಧಿಕಾರಿ ರವಿ ಮುಡಿಮಾರ್, ಜನಜಾಗ್ರತಿ ವೇದಿಕೆಯ ಸದಸ್ಯ ಹರೀಶ್ ಶೆಟ್ಟಿ ಮಾಡ, ಕಾಸರ ಗೋಡು ಭಜನಾ ಪರಿಷತ್ತು ಅಧ್ಯಕ್ಷ ವೆಂಕಟರಮಣ ಹೊಳ್ಳ, ಮಂಜೇಶ್ವರ ತಾಲೂಕಿನ ಕೇಂದ್ರ ಒಕ್ಕೂಟದ ಅಧ್ಯಕ್ಷ ಉದಯ ಕುಮಾರ್, ಜನ ಜಾಗ್ರತಿ ವೇದಿಕೆಯ ಪದಾದಿಕಾರಿ ಗಳು, ವ್ಯವಸ್ಥಾಪನಾ ಸಮಿತಿಯ ಪದಾಧಿಕಾರಿಗಳು, ಜನಜಾಗ್ರತಿ ವೇದಿಕೆಯ ಯೋಜನಾಧಿಕಾರಿ, ಶೌರ್ಯ ವಿಪತ್ತು ಘಟಕದ ಯೋಜ ನಾಧಿಕಾರಿ, ಕಾಸರಗೋಡು, ಮಂಜೇಶ್ವರ ತಾಲೂಕಿನ ಯೋಜ ನಾಧಿಕಾರಿಗಳು, ಶಿಬಿರಾಧಿಕಾರಿ, ಆರೋಗ್ಯ ಸಹಾಯಕಿ, ನವಜೀವನ ಸಮಿತಿ ಸದಸ್ಯರು, ಶೌರ್ಯ ವಿಪತ್ತು ಘಟಕದ ಸದಸ್ಯರು, ಒಕ್ಕೂಟದ ಪದಾಧಿಕಾರಿಗಳು, ಯೋಜನೆಯ ಮೇಲ್ವಿಚಾರಕ ಶ್ರೇಣಿ ಸಿಬ್ಬಂದಿಗಳು, ಸೇವಾಪ್ರತಿನಿಧಿಗಳು, ಸಾರ್ವಜನಿಕರು ಭಾಗವಹಿಸಿದರು.