ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ‘ಮಹಾಯುತಿ’ಯದ್ದೇ ಪ್ರಾಬಲ್ಯ: ಝಾರ್ಖಂಡ್ನಲ್ಲಿ ಇಂಡಿಯಾ ಕೂಟ ಮುನ್ನಡೆ
ನವದೆಹಲಿ: ಮಹಾರಾಷ್ಟ್ರ ಮತ್ತು ಝಾರ್ಖಂಡ್ ವಿಧಾನಸಭೆ ಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಇಂದು ಬೆಳಿಗ್ಗೆ ಆರಂಭಗೊAಡಿರುವA ತೆಯೇ ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃ ತ್ವದ ಮಹಾಯುತಿ ಮೈತ್ರಿಕೂಟ ಭಾರೀ ಮುನ್ನಡೆ ಸಾಧಿಸಿದ್ದು, ಆ ಮೂಲಕ ಅಧಿಕಾರವನ್ನು ತಮ್ಮ ಕೈಯಲ್ಲೇ ಉಳಿಸಿಕೊಳ್ಳುವತ್ತ ಸಾಗುತ್ತಿದೆ.
ಮಹಾರಾಷ್ಟ್ರ ವಿಧಾನಸಭೆ ಯಲ್ಲಿ ಒಟ್ಟು 288 ಸ್ಥಾನಗಳಿದ್ದು, ಅದರಲ್ಲಿ ಒಟ್ಟಾರೆಯಾಗಿ 4,140 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಬಿಜೆಪಿ ನೇತೃತ್ವದ ಮಹಾಯುತಿ 220 ಕ್ಷೇತ್ರಗಳಲ್ಲಿ ಮುನ್ನಡೆಯ ಲ್ಲಿದೆ. ಇನ್ನು ಕಾಂಗ್ರೆಸ್ ನೇತೃತ್ವದ ಮಹಾವಿಕಾಸ್ ಅಘಾಡಿ (ಎಂವಿಎ) ಒಕ್ಕೂಟಕ್ಕೆ 55 ಕ್ಷೇತ್ರಗಳಲ್ಲಿ ಮಾತ್ರವೇ ಈತನಕ ಮುನ್ನಡೆ ಸಾಧಿಸಲು ಸಾಧ್ಯವಾಗಿದೆ. 13 ಕ್ಷೇತ್ರ ಗಳಲ್ಲಿ ಇತರರು ಮುನ್ನಡೆಯಲ್ಲಿದ್ದಾರೆ. ಇನ್ನು ಸರಕಾರ ರಚಿಸಲು 145 ಮ್ಯಾಜಿಕ್ ನಂಬ್ರ ಬೇಕಾಗಿದೆ.
ಝಾರ್ಖಂಡ್ನಲ್ಲಿ ವಿಧಾನ ಸಭೆಯ ಒಟ್ಟು 81 ಸ್ಥಾನಗಳಲ್ಲಿ ಜೆಎಂಎA ನೇತೃತ್ವದ ಇಂಡಿಯಾ ಒಕ್ಕೂಟ ಮುನ್ನಡೆ ಸಾಧಿಸಿದೆ. ಇಲ್ಲಿ 49 ಕ್ಷೇತ್ರಗಳಲ್ಲಿ ಜೆಎಂಎA ನೇತೃತ್ವದ ಒಕ್ಕೂಟ ಮುನ್ನಡೆ ಸಾಧಿಸಿದೆ.
ಬಿಜೆಪಿ ನೇತೃತ್ವದ ಎನ್ಡಿಎ 28 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಐದು ಕ್ಷೇತ್ರಗಳಲ್ಲಿ ಇತರರು ಮುನ್ನಡೆ ಸಾಧಿಸಿದ್ದಾರೆ. ಇದರಿಂದಾಗಿ ಝಾರ್ಖಂಡ್ನಲ್ಲಿ ಜೆಎಂಎA ತನ್ನ ಅಧಿಕಾರ ಉಳಿಸುವತ್ತ ಸಾಗುತ್ತಿದೆ.