ಮಹಿಳೆ ಕೆರೆಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

ಬದಿಯಡ್ಕ: ಮಹಿಳೆಯೊಬ್ಬರು ತೋಟದ ಕೆರೆಯಲ್ಲಿ ಬಿದ್ದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಕುಂಬ್ಡಾಜೆ ಕೆದುಮೂಲೆ ನಿವಾಸಿ ದಿ| ಕೃಷ್ಣನ್ ಎಂಬವರ ಪತ್ನಿ ವಿಶಾಲಾಕ್ಷಿ (73) ಮೃತ ಮಹಿಳೆ. ಇವರು ನಿನ್ನೆ ಬೆಳಿಗ್ಗೆ ಹುಲ್ಲು ಹೆರೆಯಲೆಂದು ತಿಳಿಸಿ ಮನೆಯಿಂದ ಹೊರಗೆ ತೆರಳಿದ್ದರೆನ್ನಲಾಗಿದೆ. ಆದರೆ ಮರಳಿ ಬಾರದ ಹಿನ್ನೆಲೆಯಲ್ಲಿ ಹುಡುಕಾಡುತ್ತಿದ್ದಾಗ ಮನೆ ಸಮೀಪದ ಕೆರೆಯಲ್ಲಿ ಮೃತದೇಹ ಪತ್ತೆಯಾಗಿದೆ.

ಮೃತರು ಸಹೋದರ-ಸಹೋದರಿಯರಾದ ಕೃಷ್ಣ,ಶಾರದ, ಕುಂಞಾಳು ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ. ಇನ್ನೋರ್ವ ಸಹೋದರ ವಸಂತ,ಸಹೋದರಿ ಕುಂಞಮ್ಮ ಈ ಹಿಂದೆ ನಿಧನಹೊಂದಿದ್ದಾರೆ.

Leave a Reply

Your email address will not be published. Required fields are marked *

You cannot copy content of this page