ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕ
ನವದೆಹಲಿ: ಭಾರತೀಯ ಚುನಾವಣಾ ಆಯೋಗದ ನೂತನ ಮುಖ್ಯ ಆಯುಕ್ತರಾಗಿ ಹಿರಿಯ ಐಎಎಸ್ ಅಧಿಕಾರಿ ಜ್ಞಾನೇಶ್ ಕುಮಾರ್ (61)ರನ್ನು ನೇಮಿಸ ಲಾಗಿದೆ. ಪ್ರಧಾನಿ ನರೇಂದ್ರಮೋದಿ ನೇತೃತ್ವದ ತ್ರಿಸದಸ್ಯ ಸಮಿತಿ ಈ ಆಯ್ಕೆ ನಡೆಸಿದೆ. ಹಾಲಿ ಮುಖ್ಯ ಚುನಾವಣಾ ಆಯುಕ್ತರಾಗಿರುವ ರಾಜೀವ್ ಕುಮಾರ್ ನಾಳೆ ಸೇವೆಯಿಂದ ನಿವೃತ್ತರಾಗಲಿರುವ ಹಿನ್ನೆಲೆಯಲ್ಲಿ ತೆರವುಗೊಳ್ಳುವ ಆ ಸ್ಥಾನಕ್ಕೆ ಜ್ಞಾನೇಶ್ ಕುಮಾರ್ರನ್ನು ನೇಮಿಸಲಾಗುವುದು.