ಮೂಡಂಬೈಲು ಸರಕಾರಿ ಪ್ರೌಢಶಾಲೆ ಶತಮಾನೋತ್ಸವ ಆಚರಣೆ ಉದ್ಘಾಟನೆ ದ. 1ರಂದು
ಮಂಜೇಶ್ವರ: ಮೂಡಂಬೈಲು ಸರಕಾರಿ ಪ್ರೌಢಶಾಲೆಯ ಶತಮಾ ನೋತ್ಸವ ವರ್ಷಾಚರಣೆಯನ್ನು ವರ್ಷಪೂರ್ತಿ ಆಚರಿಸಲಾಗುವುದು. ಇದರ ಉದ್ಘಾಟನಾ ಸಮಾರಂಭ ಡಿಸೆಂಬರ್ 1ರಂದು ಬೆಳಿಗ್ಗೆ 10.30ಕ್ಕೆ ಜರಗಲಿದೆ.
ಮೀಂಜ ಪಂಚಾಯತ್ ಅಧ್ಯಕ್ಷೆ ಸುಂದರಿ ಆರ್ ಶೆಟ್ಟಿ ಅಧ್ಯಕ್ಷತೆ ವಹಿಸು ವರು. ಪದ್ಮಶ್ರೀ ಪುರಸ್ಕೃತ ಅಕ್ಷರ ಸಂತ ಹರೇಕಳ ಹಾಜಬ್ಬ ಶತಮಾನೋತ್ಸವ ವರ್ಷಾಚgಣೆಯನ್ನು ಉದ್ಘಾಟಿಸುವರು. ಕಾಸರಗೋಡು ಸರಕಾರಿ ಕಾಲೇಜು ಪ್ರಾಧ್ಯಾಪಕ ಡಾ. ರತ್ನಾಕರ ಮಲ್ಲಮೂಲೆ, ಜಿ.ಪಂ. ಸದಸ್ಯೆ ಕಮಲಾಕ್ಷಿ ಕೆ., ಮೀಂಜ ಪಂ. ಉಪಾಧ್ಯಕ್ಷ ಜಯರಾಮ ಬಲ್ಲಂಗುಡೇಲು, ಮಂಜೇಶ್ವರ ಬ್ಲಾಕ್ ಪಂ. ಸದಸ್ಯೆ ಅಶ್ವಿನಿ ಎಂ.ಎಲ್, ಶಿಕ್ಷಣಾಧಿಕಾರಿ ದಿನೇಶ್ ವಿ, ಮಂಜೇಶ್ವರ ಸಹಾಯಕ ಶಿಕ್ಷಣಾಧಿಕಾರಿ ರಾಜಗೋಪಾಲ, ಜಾಯ್ ಜಿ., ಶಾಲಾ ಬೆಂಬಲ ಸಮಿತಿ ಅಧ್ಯಕ್ಷ ಶಿವರಾಮ ಪದಕಣ್ಣಾಯ ಮುಖ್ಯ ಅತಿಥಿಯಾಗಿರುವರು. ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಅಬ್ದುಲ್ಲ ಪಜಿಂಗಾರು, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಮ್ ಪ್ರಕಾಶ್ ಆಳ್ವ, ಮಾತೆಯರ ಸಂಘದ ಅಧ್ಯಕ್ಷೆ ಸುಮಿತಾ ಎ.ಎಸ್ ಉಪಸ್ಥಿತರಿರು ವರು. ಶಾಲಾ ಶತಮಾನೋತ್ಸವ ಸಮಿತಿಯ ಅಧಕ್ಷ ನ್ಯಾಯವಾದಿ ಎಂ. ದಾಮೋದರ ಶೆಟ್ಟಿ, ಮುಖ್ಯೋ ಪಾಧ್ಯಾಯ ಜಾರ್ಜ್ ಕ್ರಾಸ್ತ ಸಿ.ಎಚ್. ಭಾಗವಹಿಸುವರು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರಗಲಿದೆ.