ಮೊಗ್ರಾಲ್ ಪುತ್ತೂರು ಶಾಲೆಯಲ್ಲಿ ಪಿಟಿಎ ಪದಾಧಿಕಾರಿಗಳು, ವಿದ್ಯಾರ್ಥಿಗಳ ಮೇಲೆ ಹಲ್ಲೆ: ಐದು ಮಂದಿ ವಿರುದ್ಧ ಕೇಸು

ಕಾಸರಗೋಡು: ಮೊಗ್ರಾಲ್ ಪುತ್ತೂರು  ಹೈಯರ್ ಸೆಕೆಂಡರಿ ಶಾಲೆ ಯಲ್ಲಿ ಪಿಟಿಎ ಪದಾಧಿಕಾರಿಗಳು  ಮತ್ತು ವಿದ್ಯಾರ್ಥಿಯೋರ್ವನ ಮೇಲೆ ಹಲ್ಲೆ ನಡೆಸಿದ ದೂರಿನಂತೆ ಕಾಸರ ಗೋಡು ಪೊಲೀಸರು ಐದು ಮಂದಿ ವಿರುದ್ದ ಪ್ರಕರಣ ದಾಖಲಿಸಿಕೊಂಡಿ ದ್ದಾರೆ.  ಪಿಟಿಎ ಪದಾಧಿಕಾರಿಯೋ ರ್ವರು ಈ ಬಗ್ಗೆ  ಪೊಲೀಸರಿಗೆ ದೂರು ನೀಡಿದ್ದು, ಅದರಂತೆ ಐದು ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಜುಲೈ 8ರಂದು ಬೆಳಿಗ್ಗೆ 11 ಗಂಟೆಗೆ ಪ್ರಸ್ತುತ ಶಾಲೆಯ ಎರಡನೇ ಮಹಡಿಯಲ್ಲಿ ಹಲ್ಲೆ ನಡೆಸಲಾಗಿದೆಯೆಂದೂ ಜುಲೈ ೭ರಂದು ಈ ಶಾಲೆಯಲ್ಲಿ ವಿದ್ಯಾರ್ಥಿಗಳ ಮಧೆ ನಡೆದ ಘರ್ಷಣೆ ಬಗ್ಗೆ ಪ್ರಾಂಶುಪಾಲರಿಗೆ ದೂರು ನೀಡಿದ ದ್ವೇಷದಿಂದ ತಮ್ಮ ಮೇಲೆ ಹಲ್ಲೆ ನಡೆಸಲಾಗಿದೆಯೆಂದು ಪೊಲೀಸರಿಗೆ ನೀಡಲಾದ ದೂರಿನಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *

You cannot copy content of this page