ರಾಜಗೋಪುರ ದೇವಾಲಯಕ್ಕೆ ಶೋಭೆ- ಎಡನೀರು ಶ್ರೀ
ಬದಿಯಡ್ಕ: ರಾಜಗೋಪುರ ದೇವಸ್ಥಾನಕ್ಕೆ ಹಾಗೂ ಊರಿಗೆ ಶೋಭೆಯನ್ನು ತರುತ್ತದೆ. ದೇವಾಲಯಗಳು ಊರಿನ ಔನತ್ಯದ ಪ್ರತೀಕವಾಗಿದೆ. ದೇವಮಂದಿರಗಳು, ವಿದ್ಯಾಲಯಗಳು ಉಚ್ಚಸ್ಥಾನದಲ್ಲಿದ್ದರೆ ಆ ಊರು ಸುಭಿಕ್ಷೆಯಿಂದ ಕೂಡಿರುತ್ತದೆ ಎಂದು ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ನುಡಿದರು.
ಕಾರ್ಮಾರು ಶ್ರೀ ಮಹಾವಿಷ್ಣು ದೇವಸ್ಥಾನದ ಜೀರ್ಣೋದ್ಧಾರ ಕಾರ್ಯವು ಭರದಿಂದ ಸಾಗುತ್ತಿದ್ದು, ದೇವಾಲಯದ ಮುಂಭಾಗದಲ್ಲಿ ನಿರ್ಮಾಣಗೊಳ್ಳಲಿರುವ ರಾಜಗೋಪುರಕ್ಕೆ ಶಿಲಾನ್ಯಾಸಗೈದು ಅವರು ಆಶೀರ್ವಚನ ನೀಡಿದರು.
ಜೀರ್ಣೋದ್ಧಾರ ಸಮಿತಿಯ ರಕ್ಷಾಧಿಕಾರಿ ಜಯದೇವ ಖಂಡಿಗೆ ಅಧ್ಯಕ್ಷತೆ ವಹಿಸಿದ್ದರು. ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸತ್ಯನಾರಾಯಣ ಬೆಳೇರಿ ವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ| ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ, ಶ್ಯಾಮ ಸುದರ್ಶನ್ ಹೊಸಮೂಲೆ, ರಾಹುಲ್ ಅಶೋಕ್, ಅಖಿಲೇಶ್ ನಗುಮುಗಂ, ನರೇಂದ್ರ ಬಿ.ಎನ್, ವೆಂಕಟ ಗಿರೀಶ್ ಪಟ್ಟಾಜೆ ಉಪಸ್ಥಿತರಿದ್ದರು. ಜೀರ್ಣೋ ದ್ಧಾರ ಸಮಿತಿ ಅಧ್ಯಕ್ಷ ಕೃಷ್ಣಮೂರ್ತಿ ಪುದುಕೋಲಿ ಸ್ವಾಗತಿಸಿ, ಜೀರ್ಣೋದ್ಧಾರ ಸಮಿತಿಯ ಜೊತೆಕಾರ್ಯದರ್ಶಿ ವಿಜಯ ಕುಮಾರ್ ಮಾನ್ಯ ವಂದಿಸಿದರು. ಕಾರ್ಯದರ್ಶಿ ಮಹೇಶ್ ಕುಮಾರ್ ಮಾನ್ಯ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಉಪಾಧ್ಯಕ್ಷ ಸುಂದರ ಶೆಟ್ಟಿ ಕೊಲ್ಲಂಗಾನ ನಿರೂಪಿಸಿದರು.