ರೈಲಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳಕ್ಕೆ ಯತ್ನ: ಕರ್ನಾಟಕದ ಯುವಕ ಸೆರೆ

ಕಾಸರಗೋಡು: ರೈಲಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಲೆತ್ನಿಸಿದ ಯುವಕನನ್ನು ಕಾಸರಗೋಡು ರೈಲ್ವೇ ಪೊಲೀಸರು ಸೆರೆ ಹಿಡಿದಿದ್ದಾರೆ.

ಕರ್ನಾಟಕ ಹುಬ್ಬಳ್ಳಿ ರಾಮನಗರ ಕೋಡುಪಾಳ ನಿವಾಸಿ ರಾಜಶೇಖರ (34) ಸೆರೆಗೊಳಗಾದ ಯುವಕ.

ಮಂಗಳೂರು- ತಿರುವನಂತಪುರ ಎಕ್ಸ್‌ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ 20ರ ಹರೆಯದ ಯುವತಿಗೆ ನಿನ್ನೆ ರಾತ್ರಿ ಅದೇ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಆರೋಪಿ ಲೈಂಗಿಕ ಕಿರುಕುಳ ನೀಡ ಲೆತ್ನಿಸಿದ ಆರೋಪದಂತೆ ಆ ಯುವತಿ ಕಾಸರಗೋಡು ರೈಲ್ವೇ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ಪೊಲೀಸರು ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

You cannot copy content of this page