ರೈಲು ಹಳಿಯಲ್ಲಿ ಯುವಕನ ಮೃತದೇಹ ಪತ್ತೆ
ಉಪ್ಪಳ: ಅಪರಿಚಿತ ಯುವಕನ ಮೃತದೇಹ ರೈಲು ಹಳಿಯಲ್ಲಿ ಪತ್ತೆಯಾಗಿದೆ. ಉಪ್ಪಳ ಗೇಟ್ ಬಳಿ ನಿನ್ನೆ ಮಧ್ಯಾಹ್ನ ೧೨ ಗಂಟೆ ವೇಳೆ ಮೃತದೇಹ ಪತ್ತೆಯಾಗಿದ್ದು, ಸ್ಥಳೀಯರು ನೀಡಿದ ಮಾಹಿತಿ ಪ್ರಕಾರ ಮಂಜೇಶ್ವರ ಪೊಲೀಸರು ತಲುಪಿ ಮೃತದೇಹವನ್ನು ಮಂಗಲ್ಪಾಡಿ ತಾಲೂಕು ಆಸ್ಪತ್ರೆಯ ಶವಾಗಾರಕ್ಕೆ ತಲುಪಿಸಿ ದ್ದಾರೆ. ಮೃತ ವ್ಯಕ್ತಿಗೆ ೩೦ ವರ್ಷ ಪ್ರಾಯ ಅಂದಾಜಿಸಲಾಗಿದ್ದು, ಪ್ಯಾಂಟ್ ಹಾಗೂ ಶರ್ಟ್ ಧರಿಸಿದ್ದಾನೆ.