ಲೋಕಸಭಾ ಚುನಾವಣೆ: ಪ್ರತೀ ವಿಧಾನಸಭಾ ಕ್ಷೇತ್ರದ ಮತ ಎಣಿಕೆಗೆ 14 ಟೇಬಲ್ಗಳು
ಕಾಸರಗೋಡು: ಲೋಕಸಭಾ ಚುನಾವಣೆಯ ಮತ ಎಣಿಕೆಯ ಕ್ರಮೀಕರಣಗಳಿಗೆ ಅಂತಿಮ ರೂಪು ನೀಡಲಾಗಿದೆ. ಇದರಂತೆ ಕಾಸರ ಗೋಡು ಲೋಕಸಭಾ ಕ್ಷೇತ್ರಕ್ಕೆ ಒಳಪಟ್ಟ ಒಟ್ಟು ಏಳು ವಿಧಾನಸಭಾ ಕ್ಷೇತ್ರಗಳ ಪೈಕಿ ಪ್ರತೀ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ತಲಾ 14 ಟೇಬಲ್ಗಳಲ್ಲಾಗಿ ನಡೆಯಲಿದೆ. ಕಲೆಕ್ಟರೇಟ್ನಲ್ಲಿ ನಡೆದ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯಲ್ಲಿ ಈ ತೀರ್ಮಾನ ಪ್ರಕಟಿಸಲಾಯಿತು. ಜಿಲ್ಲಾಧಿಕಾರಿ ಇಂಭಶೇಖರ್ ಸಭೆಯ ಅಧ್ಯಕ್ಷತೆ ವಹಿಸಿದರು. ಈಬಾರಿ ಮತ ಎಣಿಕೆ ಪೆರಿಯಾದಲ್ಲಿರುವ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ನಡೆಯಲಿದೆ. ಜೂನ್ ೪ರಂದು ಮತ ಎಣಿಕೆ ನಡೆಯಲಿದೆ. ಮತ ಎಣಿಕೆಗೆ ಅಗತ್ಯದ ಎಲ್ಲಾ ಸಿದ್ಧತೆಗಳನ್ನು ಈಗಾಗಲೇ ನಡೆಸಲಾಗಿದೆ.