ಮಂಜೇಶ್ವರ: ಕೇಂದ್ರ ಸರಕಾರದ ವಕ್ಫ್ ತಿದ್ದುಪಡಿ ಕಾಯ್ದೆಯ ವಿರುದ್ಧ ಜಿಲ್ಲೆಯ ಮಂಜೇಶ್ವರದಲ್ಲಿ ಮುಸ್ಲಿಂ ಸಂಘಟನೆಗಳು ಸೇರಿಕೊಂಡು ವಕ್ಫ್ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ಕುಂಜತ್ತೂರಿನಿಂದ ಹೊಸಂಗಡಿ ತನಕ ಪ್ರತಿಭಟನಾ ಮೆರವಣಿಗೆ ನಡೆಸಿದರು. ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಹಿಂತೆಗೆಯಬೇಕೆಂದು ಆಗ್ರಹಿಸಿ ಮೆರವಣಿಗೆ ನಡೆಸಲಾಗಿದೆ. ಮೆರವಣಿಗೆಗೆ ಮುಂಚಿತವಾಗಿ ಪಹಲ್ಗಾಮ್‌ನಲ್ಲಿ ಹುತಾತ್ಮರಾದವರ ಆತ್ಮಕ್ಕೆ ಶಾಂತಿಗಾಗಿ ಮೌನ ಪ್ರಾರ್ಥನೆ ನಡೆಸಲಾಯಿತು. ಮೆರವಣಿಗೆ ಹೊಸಂಗಡಿಯಲ್ಲಿ ಸಮಾಪ್ತಿಗೊಂಡಿತು.
