ವಯನಾಡ್‌ನ ಬೆನ್ನಲ್ಲೇ ರಾಯ್‌ಬರೇಲಿಯಿಂದಲೂ ರಾಹುಲ್ ಗಾಂಧಿ ಸ್ಪರ್ಧೆ: ಇಂದೇ ನಾಮಪತ್ರ ಸಲ್ಲಿಕೆ

ನವದೆಹಲಿ: ಉತ್ತರ ಪ್ರದೇಶದ ಎರಡು ಹೈ- ಪ್ರೊಫೈಲ್ ಲೋಕಸಭಾ ಕ್ಷೇತ್ರಗಳಾದ ರಾಯ್‌ಬರೇಲಿ ಮತ್ತು ಅಮೇರಿ ಬಗ್ಗೆ ಉಳಿದಿದ್ದ ಸಸ್ಪೆನ್ಸ್‌ನ್ನು ಕೊನೆಗೂ ಕಾಂಗ್ರೆಸ್ ಬಹಿರಂಗಪಡಿಸಿದೆ.

ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ಈ  ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿರುವ ಕಾಂಗ್ರೆಸ್ ನೇತಾರ ರಾಹುಲ್ ಗಾಂಧಿ ಅದರ ಹೊರತಾಗಿ ರಾಯ್‌ಬರೇಲಿ ಲೋಕಸಭಾ ಕ್ಷೇತ್ರದಿಂದಲೂ ಸ್ಪರ್ಧಿಸಲಿದ್ದಾರೆ.

ಈ ಬಗ್ಗೆ ಕಾಂಗ್ರೆಸ್ ಅಧಿಕೃತ ಘೋಷಣೆ ಮಾಡಿದೆ. ಇದರಂತೆ ರಾಹುಲ್ ಗಾಂಧಿ ರಾಯ್‌ಬರೇಲಿ ಲೋಕಸಭಾ ಕ್ಷೇತ್ರದ ಉಮೇದ್ವಾರರಾಗಿ ಇಂದೇ ನಾಮಪತ್ರ ಸಲ್ಲಿಸಲಿದ್ದಾರೆ. ಆ ವೇಳೆ ಅವರ ಜತೆ ಸೋನಿಯಾ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪ್ರಿಯಾಂಕಾ ಗಾಂಧಿ ಸೇರಿದಂತೆ ಕಾಂಗ್ರೆಸ್‌ನ ಹಲವು ಗಣ್ಯರು ಅವರನ್ನು ಅನುಗಮಿಸಲಿದ್ದಾರೆ.

ರಾಯ್‌ಬರೇಲಿಯಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧಿಸುವರೆಂಬ ಪ್ರಚಾರವೂ ಈ ಹಿಂದೆ ಉಂಟಾಗಿತ್ತು. ಆದರೆ ಕೊನೆ ಘಳಿಗೆಯಲ್ಲಿ ಅಚ್ಚರಿಯೆಂಬಂತೆ ರಾಹುಲ್ ಗಾಂಧಿಯನ್ನು ಕಣಕ್ಕಿಳಿಸಲಾಗಿದೆ. ಮಾತ್ರವಲ್ಲ ಅಮೇಠಿ ಲೋಕಸಭಾ ಕ್ಷೇತ್ರದಿಂದಲೂ ಅಚ್ಚರಿ ಎಂಬಂತೆ ಕಾಂಗ್ರೆಸ್‌ನ ಕಿಶೋರಿಲಾಲ್ ಶರ್ಮಾರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ.

Leave a Reply

Your email address will not be published. Required fields are marked *

You cannot copy content of this page