ವಿದ್ಯಾರ್ಥಿನಿಯೊಂದಿಗೆ ಅನುಚಿತ ವರ್ತನೆ: ಮಲತಂದೆ ವಶಕ್ಕೆ
ಕಾಸರಗೋಡು: ಹತ್ತನೇ ತರಗತಿಯ ವಿದ್ಯಾರ್ಥಿನಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆಕೆಯ ಮಲತಂದೆ ವಿರುದ್ಧ ಕಾಸರಗೋಡು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಿಸಲಾಗಿದೆ.
ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಗೊಳಪಟ್ಟ ಪ್ರದೇಶದ ಬಾಲಕಿ ಯೊಂದಿಗೆ ಅನುಚಿತವಾಗಿ ವರ್ತಿಸಿ ದುದಾಗಿ ಆರೋಪಿಸಿ ಆಕೆ ನೀಡಿದ ದೂರಿನಂತೆ ಆಕೆಯ ೪೨ ವರ್ಷದ ಮಲತಂದೆ ವಿರುದ್ಧ ಈ ಪ್ರಕರಣ ದಾಖಲಿಸಲಾಗಿದೆ. ಆತನನ್ನು ಪೊಲೀ ಸರು ವಶಕ್ಕೆ ತೆಗೆದುಕೊಂಡಿದ್ದಾರೆ.