ವಿಲ್ಲೇಜ್ ಆಫೀಸ್ ವ್ಯಾಪ್ತಿಯಲ್ಲಿ ಕರಡು ಮತದಾರರ ಪಟ್ಟಿ ಪರಿಶೀಲನೆ
ಕಾಸರಗೋಡು: ಸಂಕ್ಷಿಪ್ತ ಮತದಾರರ ಪಟ್ಟಿ ೨೦೨೪ ಪರಿಷ್ಕರಣೆಯಂಗವಾಗಿ ಕರಡು ಮತದಾರರ ಪಟ್ಟಿಯ ಪರಿಶೀಲನೆಯನ್ನು ವಿಲ್ಲೇಜ್ ಕಚೇರಿ ವ್ಯಾಪ್ತಿಯಲ್ಲಿ ನಾಳೆ ಬೆಳಿಗ್ಗೆ ೧೦ ಗಂಟೆಯಿಂದ ನಡೆಸಲು ಜಿಲ್ಲಾ ಚುನಾವಣಾ ಅಧಿಕಾರಿಯಾದ ಜಿಲ್ಲಾಧಿಕಾರಿ ಕೆ. ಇಂಬಶೇಖರ್ ಜಿಲ್ಲೆಯ ಎಲ್ಲಾ ವಿಲ್ಲೇಜ್ ಆಫೀಸರ್‌ಗಳಿಗೆ ಆದೇಶ ನೀಡಿದ್ದಾರೆ. ವಿಲ್ಲೇಜ್ ವ್ಯಾಪ್ತಿಯ ಬೂತ್ ಮಟ್ಟದ ಅಧಿಕಾರಿಗಳು, ಬೂತ್ ಏಜೆಂಟರುಗಳು ಪರಿಶೀಲನಾ ಕೇಂದ್ರಕ್ಕೆ ಹಾಜರಾಗಬೇಕು. ಈ ಶಿಬಿರದಲ್ಲಿ ಮತದಾರರ ಪಟ್ಟಿಯನ್ನು ಪರಿಶೀಲಿಸಿ ಮೃತಪಟ್ಟ, ಅನರ್ಹ ಮತದಾರರನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗುವುದು.