ವ್ಯಕ್ತಿ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆ
ಕಾಸರಗೋಡು: ವ್ಯಕ್ತಿಯೊಬ್ಬರು ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ನೆಲ್ಲಿಕುಂಜೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರ ಬಳಿಯ ಲಕ್ಷ್ಮೀ ನಿಲಯದ ಬಾಲಕೃಷ್ಣ ಶೆಟ್ಟಿ (62) ಮೃತಪಟ್ಟ ವ್ಯಕ್ತಿ. ಇವರು ಇಂದು ಬೆಳಿಗ್ಗೆ 6.30ಕ್ಕೆ ಮನೆಯ ಬೆಡ್‌ರೂಂನಲ್ಲಿ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಪೊಲೀಸರು ತಲುಪಿ ಮಹಜರು ನಡೆಸಿದ ಬಳಿಕ ಮೃತದೇಹವನ್ನು ಜನರಲ್ ಆಸ್ಪತ್ರೆಗೆ ತಲುಪಿಸಲಾಗಿದೆ. ಮೃತರು ಪತ್ನಿ ಬೇಬಿ, ಮಕ್ಕಳಾದ ಸಂದೀಪ್, ಸಂತೋಷ್, ಸಹೋದರರಾದ ಸದಾಶಿವ, ರಾಮಣ್ಣ, ವಿಠಲ, ಸಹೋದರಿ ಕಮಲ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.