ಹಾಲಿನ ಲಾರಿ ಢಿಕ್ಕಿ ಪಾದಚಾರಿಗೆ ಗಾಯ

ಕುಂಬಳೆ: ಹಾಲು ಸಾಗಾಟದ ಲಾರಿ ಢಿಕ್ಕಿ ಹೊಡೆದು ಪಾದಚಾರಿ ಗಾಯಗೊಂಡ ಘಟನೆ ನಡೆದಿದೆ. ಆರಿಕ್ಕಾಡಿ ನಿವಾಸಿ ಅಬ್ದುಲ್ಲ (೬೯) ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ನಿನ್ನೆ ಮಧ್ಯಾಹ್ನ ಇವರು ಆರಿಕ್ಕಾಡಿ ಜಂಕ್ಷನ್‌ನಲ್ಲಿ ನಡೆದು ಹೋಗುತ್ತಿದ್ದಾಗ ಆಗಮಿಸಿದ ಲಾರಿ ಢಿಕ್ಕಿ ಹೊಡೆದಿದೆಯೆನ್ನಲಾಗಿದೆ. ಈ ಬಗ್ಗೆ ಅಬ್ದುಲ್ಲರ ಪುತ್ರ ಮೊಹಮ್ಮದ್ ಅಶ್ರಫ್ ನೀಡಿದ ದೂರಿನಂತೆ ಲಾರಿ ಚಾಲಕನ ವಿರುದ್ಧ ಕೇಸು ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

You cannot copy content of this page