ಬೆಂಗಳೂರು: ಹಿರಿಯ ಪತ್ರಕರ್ತ ಸಂಯುಕ್ತ ಕರ್ನಾಟಕದ ಸಂಪಾದಕ ವಸಂತ ನಾಡಿಗೇರ (59) ಇಂದು ಮುಂಜಾನೆ ನಿಧನ ಹೊಂದಿದರು. ಮೂಲತಃ ಹಾವೇರಿ ರಾಣಿಬೆನ್ನೂರಿನವರಾದ ನಾಡಿಗೇರ್ ವಿವಿಧ ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿದ್ದರು. ಲತಾಮಂಗೇಷ್ಕರ್ ಅವರ ಜೀವನ ಚರಿತ್ರೆಯನ್ನು ಕನ್ನಡದಲ್ಲಿ ಬರೆದ ಇವರು ಪತ್ನಿ ಹಾಗೂ ಇಬ್ಬರು ಮಕ್ಕಳು ಸಹಿತ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.