ಹಿರಿಯ ಪತ್ರಕರ್ತ ಮಲಾರ್ ಜಯರಾಮ ರೈಗೆ ಕನ್ನಡ ಸಾಹಿತ್ಯ ಪರಿಷತ್ನಿಂದ ಅಭಿನಂದನೆ
ಕಾಸರಗೋಡು: ಕನ್ನಡ ಭಾಷೆ ಮತ್ತು ಸಂಸ್ಕೃತಿಗಾಗಿ ದುಡಿದ ಹಿರಿಯರನ್ನು ಗೌರವಿಸುವ ಉದ್ದೇಶದಿಂದ ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕವು ಆರಂಭಿಸಿದ ‘ಸಾಹಿತ್ಯ ಪರಿಷತ್ತಿನ ನಡಿಗೆ ಕನ್ನಡದ ಹಿರಿಯ ಸಾಧಕರ ಕಡೆಗೆ’ ಎಂಬ ಕಾರ್ಯಕ್ರಮದಂಗವಾಗಿ ಹಿರಿಯ ಪತ್ರಕರ್ತ,ತುಳು-ಕನ್ನಡ ಸಾಹಿತಿ ಮಲಾರ್ ಜಯರಾಮ ರೈ ಅವರನ್ನು ಶಿರಿಯಾದ ಅಡ್ಕದಲ್ಲಿರುವ ಅವರ ನಿವಾಸದಲ್ಲಿ ಅಭಿನಂದಿಸಲಾಯಿತು.
ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಅಧ್ಯಕ್ಷ ಡಾ.ಜಯಪ್ರಕಾಶ ನಾರಾಯಣ ತೆೆÆಟ್ಟೆತ್ತೋಡಿ ಮಲಾರ್ ಜಯರಾಮ ರೈ ದಂಪತಿಯನ್ನು ಫಲಪುಷ್ಪ, ಸ್ಮರಣಿಕೆ ನೀಡಿ ಗೌರವಿಸಿದರು. ಪರಿಷತ್ತಿನ ಗೌರವ ಕಾರ್ಯದರ್ಶಿ ಶೇಖರ ಶೆಟ್ಟಿ ಬಾಯಾರ್ ಅಭಿನಂದನಾ ಭಾಷಣ ಮಾಡಿದರು. ಎಂ.ನಾ ಚಂಬಲ್ತಿಮಾರ್, ಉಪನ್ಯಾಸಕ ಸುರೇಶ್ ಶೆಟ್ಟಿ ಶುಭಹಾರೈಸಿದರು. ಶಿಕ್ಷಕಿ ಸಾಯಿ ಈಶ್ವರಿ,ಸಾಯಿಭದ್ರಾ ರೈ ಶಿರಿಯ, ಸಾಯಿ ಧನ್ಯಶ್ರೀ ಉಪಸ್ಥಿತರಿದ್ದರು. ಮಲಾರ್ ಜಯರಾಮ ರೈ ಸನ್ಮಾನಕ್ಕೆ ಕೃತಜ್ಞತೆ ಸಲ್ಲಿಸಿ ಮಾತನಾಡಿದರು.
ಕನ್ನಡ ಸಾಹಿತ್ಯ ಪರಿಷತ್ ಕೇರಳ ಗಡಿನಾಡ ಘಟಕದ ಸಂಘಟನಾ ಕಾರ್ಯದರ್ಶಿ ವಿಶಾಲಾಕ್ಷ ಪುತ್ರಕಳ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಸಂಘಟನಾ ಕಾರ್ಯದರ್ಶಿ ರಾಮಚಂದ್ರ ಭಟ್ ಧರ್ಮತ್ತಡ್ಕ ವಂದಿಸಿದರು.