ಹೊಸಂಗಡಿ: ಅಷ್ಟಮಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ಮಂಜೇಶ್ವರ: ಶ್ರೀ ಅಯ್ಯಪ್ಪ ಫ್ರೆಂಡ್ಸ್ ಕ್ಲಬ್ ಶ್ರೀ ಅಯ್ಯಪ್ಪ ಕ್ಷೇತ್ರ ಹೊಸಂಗಡಿ ಇದರ ಆಶ್ರಯದಲ್ಲಿ ನಡೆಯುವ 13 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಮತ್ತು ಮೊಸರು ಕುಡಿಕೆ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನಿನ್ನೆ ಹೊಸಂಗಡಿ ಶ್ರೀ ಅಯ್ಯಪ್ಪ ಕ್ಷೇತ್ರದಲ್ಲಿ ನಡೆಯಿತು. ಹೊಸಂಗಡಿ ಶ್ರೀ ಅಯ್ಯಪ್ಪ ಕ್ಷೇತ್ರದ ಅಧ್ಯಕ್ಷ ಪದ್ಮನಾಭ ಕಡಪ್ಪÀÄರ, ಹೊಸಂಗಡಿ ಶ್ರೀ ಅಯ್ಯಪ್ಪ ಫ್ರೆಂಡ್ಸ್ ಕ್ಲಬ್‌ನ ಗೌರವ ಅಧ್ಯಕ್ಷ ನ್ಯಾಯವಾದಿ ನವೀನ್ ರಾಜ್, ಹೊಸಂಗಡಿ ಶ್ರೀ ಅಯ್ಯಪ್ಪ ಕ್ಷೇತ್ರದ ಅರ್ಚಕ ತಿರುಮಲೇಶ್ ಆಚಾರ್ಯ, ಮೀಂಜ ಪಂ. ಸದಸ್ಯ ಆಶಾಲತಾ ಬಿ ಎಂ, ದಿನಕರ್ ಬಿಎಂ, ಚಂದ್ರಹಾಸ ಪೆಲಪ್ಪಾಡಿ, ವೀಣಾ ಚಂದ್ರಹಾಸ್, ರೋಹಿತ್ ಬಿ ಎಂ, ಅಶ್ವಿನಿ ರೋಹಿತ್, ಸುನಿಲ್ ಗಾಣಿಗ, ಜಯಪ್ರಕಾಶ್ , ನಮೃತ ಜಯಪ್ರಕಾಶ್, ಹಾಗೂ ಕ್ಲಬ್‌ನ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

You cannot copy contents of this page