ಅಕ್ರಮ ಹಣ ವರ್ಗಾವಣೆ; ದೆಹಲಿಯಲ್ಲಿ ಎಎಪಿ ನೇತಾರನ ವಸತಿಯಲ್ಲಿ ಇ.ಡಿ ದಾಳಿ
ದೆಹಲಿ: ಅಕ್ರಮ ಹಣ ವರ್ಗಾವಣೆ ತನಿಖೆಯಂಗವಾಗಿ ಜಾರಿ ನಿರ್ದೇಶನಾಲಯ (ಇಡಿ) ಇಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಕಾರ್ಯ ದರ್ಶಿಯ ನಿವಾಸ ಸೇರಿದಂತೆ ಸುಮಾರು ಹತ್ತು ಸ್ಥಳಗಳಲ್ಲಿ ಶೋಧ ನಡೆಸುತ್ತಿದೆ. ಕಾರ್ಯಾಚರಣೆಯಲ್ಲಿ ಮಹತ್ವದ ದಾಖಲೆಪತ್ರಗಳ ಪರಿಶೀಲನೆ ನಡೆಯುತ್ತಿದೆ ಎಂದು ತಿಳಿದು ಬಂದಿದೆ.
ಇದೇ ವೇಳೆ ಮದ್ಯ ನೀತಿ ಭ್ರಷ್ಟಾಚಾರ ಪ್ರಕರಣದಲ್ಲಿ ತನಿಖೆಗೆ ಹಾಜರಾಗದ ಮುಖ್ಯಮಂತ್ರಿ ಅರವಿಂದ ಕೇಜಿವಾಲ್ ವಿರುದ್ಧ ಇ.ಡಿ ನ್ಯಾಯಾಲಯವನ್ನು ಸಮೀಪಿಸಿರುತ್ತದೆ.