ಅಗಲ್ಪಾಡಿಯಲ್ಲಿ ಸ್ವಾಸ್ಥ್ಯ ಸಂಕಲ್ಪ ಮಾಹಿತಿ ಕಾರ್ಯಕ್ರಮ
ಬದಿಯಡ್ಕ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಜನಜಾಗೃತಿ ವೇದಿಕೆ ಕಾಸರಗೋಡು ತಾಲೂಕು ಬದಿಯಡ್ಕ ವಲಯ ಸ್ವಾಸ್ಥ್ಯ ಸಂಕಲ್ಪ ಮಾಹಿತಿ ಕಾರ್ಯಕ್ರಮ, ಮಾದಕ ವಸ್ತುಗಳ ದುಷ್ಪರಿಣಾಮ ಎಂಬ ವಿಷಯದಲ್ಲಿ ಅಗಲ್ಪಾಡಿ ಶ್ರೀ ಅನ್ನಪೂರ್ಣೇಶ್ವರಿ ಶಾಲೆಯ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಾಗಾರ ಜರಗಿತು.
ನಿವೃತ್ತ ಅಧ್ಯಾಪಕ ಚಂದ್ರಹಾಸ ನಂಬ್ಯಾರ್ ಉದ್ಘಾಟಿಸಿದರು. ಜನಜಾಗೃತಿ ವೇದಿಕೆ ಕಾಸರಗೋಡು ತಾಲೂಕು ಸಮಿತಿ ಅಧ್ಯಕ್ಷ ಅಖಿಲೇಶ್ ನಗುಮುಗಂ ಅಧ್ಯಕ್ಷತೆ ವಹಿಸಿದರು. ನಿವೃತ್ತ ಡೆಪ್ಯುಟಿ ತಹಶೀಲ್ದಾರ್ ನಾರಾಯಣ ಗೋಸಾಡ ಮಕ್ಕಳಿಗೆ ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ತರಗತಿ ನೀಡಿದರು. ಕುಂಬ್ಡಾಜೆ ಪಂ. ಸದಸ್ಯ ಹರೀಶ್ ಗೋಸಾಡ, ಮುಖ್ಯೋಪಾಧ್ಯಾಯ ಗಿರೀಶ್ ಎನ್, ಮೇಲ್ವಿಚಾರಕಿ ಸುಗುಣ, ಸೇವಾ ಪ್ರತಿನಿಧಿ ಕಮಲಾಕ್ಷಿ, ಸುನಿತ ಉಪಸ್ಥಿತರಿದ್ದರು.