ಅಡಿಕೆ ಕೃಷಿಕರ ಸಮಸ್ಯೆ ಪರಿಹಾರಕ್ಕೆ ಕಿಸಾನ್ ಸೇನೆಯಿಂದ ಜಿಲ್ಲಾಧಿಕಾರಿಗೆ ಮನವಿ

ಕಾಸರಗೋಡು: ಅಡಿಕೆ ಕೃಷಿಕರ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಆಗ್ರಹಿಸಿ ಕಿಸಾನ್ ಸೇನೆ ಜಿಲ್ಲಾಧಿಕಾರಿಗೆ ಮನವಿ ನೀಡಿತು. ಜಿಲ್ಲಾಧಿಕಾರಿ ಜಿಲ್ಲಾ ಪ್ರಿನ್ಸಿಪಲ್ ಕೃಷಿ ಅಧಿಕಾರಿಯನ್ನು ಕರೆದು ವಿಷಯಗಳ ಬಗ್ಗೆ ತಿಳಿದುಕೊಂಡರು. ಸಮಸ್ಯೆಗೆ ಪರಿಹಾರ ಕಾಣಲು, ಕೃಷಿಕರೊಂದಿಗೆ ಚರ್ಚಿಸಲು ಜಿಲ್ಲಾಧಿಕಾರಿ ಕೃಷಿ ಅಧಿಕಾರಿಗೆ ನಿರ್ದೇಶ ನೀಡಿದರು. ಇದೇ ವೇಳೆ ಬದಿಯಡ್ಕದಲ್ಲಿ ಕೃಷಿ ಅಧಿಕಾರಿಯ ಉಪಸ್ಥಿತಿಯಲ್ಲಿ ಕೃಷಿಕರ ಜೊತೆ ಚರ್ಚೆ ನಡೆಸಲು ಅವಕಾಶ ಒದಗಿಸುವುದಾಗಿ ಕಿಸಾನ್ ಸೇನೆ ತಿಳಿಸಿದೆ. ಜಿಲ್ಲಾಧ್ಯಕ್ಷ ಗೋವಿಂದ ಭಟ್ ಕೊಟ್ಟಂಗುಳಿ, ಪ್ರಧಾನ ಕಾರ್ಯದರ್ಶಿ ಶುಕೂರ್ ಕಾಣಾಜೆ, ಜೊತೆ ಕಾರ್ಯದರ್ಶಿ ಶಾಜಿ ಕಾಡಮನೆ, ಸುಲೈಕ ಮಾಹಿನ್, ನಾಸಿರ್ ಚೆರ್ಕಳ ಉಪಸ್ಥಿತರಿದ್ದರು.

RELATED NEWS

You cannot copy contents of this page