ಬೆಂಗಳೂರು: ಗಡಿನಾಡ ಕಾಸರ ಗೋಡು ಜಿಲ್ಲೆಯ ಅಡೂರು ಸರಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಕನ್ನಡ ಮಾಧ್ಯಮದಲ್ಲಿ ನೇಮಿಸಲಾದ ಕನ್ನಡ ತಿಳಿಯದ ಮಲಯಾಳ ಭಾಷೆಯ ಅಧ್ಯಾಪಿಕೆಯನ್ನು ಬದಲಾಯಿಸಿ, ಕನ್ನಡ ಭಾಷೆ ತಿಳಿದಿರುವ ಶಿಕ್ಷಕರನ್ನು ನೇಮಿಸುವಂತೆ ಕೇರಳ ಹೈಕೋರ್ಟ್ ನೀಡಿದ ತೀರ್ಪಿಗೆ ಕರ್ನಾಟಕ ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಹರ್ಷ ವ್ಯಕ್ತಪಡಿಸಿದ್ದಾರೆ. ಅಡೂರು ಶಾಲೆಯಲ್ಲಿ ಕನ್ನಡ ಮಾಧ್ಯಮಕ್ಕೆ ಮಲಯಾಳ ಶಿಕ್ಷಕಿ ಪಾಠ ಮಾಡುವಂ ತಿಲ್ಲ. ಅವರನ್ನು ಬದಲಾಯಿಸಿ ಕನ್ನಡ ಅರಿತಿರುವ ಶಿಕ್ಷಕರನ್ನೇ ನೇಮಿಸಬೇಕೆಂದು ಹೈಕೋರ್ಟ್ ತೀರ್ಪು ನೀಡಿರುವುದು ಗಡಿನಾಡ ಕನ್ನಡಿಗರ ಹೋರಾಟಕ್ಕೆ ಸಂದ ಜಯವಾಗಿದೆ ಎಂದು ಸಚಿವರು ಹೇಳಿದ್ದಾರೆ.
