ಅಮಿತ್ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆ: ರಾಹುಲ್ ಗಾಂಧಿಗೆ ಮತ್ತೆ ಸಂಕಟ; ಕೋರ್ಟ್ ನೋಟೀಸು ಜ್ಯಾರಿ

ಸುಲ್ತಾನ್‌ಪುರ್: ೨೦೧೮ರಲ್ಲಿ ಬೆಂಗಳೂರಿನಲ್ಲಿ ನಡೆದ ಸಮಾವೇಶದಲ್ಲಿ ಕೇಂದ್ರ ಗೃಹಸಚಿವ ಅಮಿತ್ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಉತ್ತರ ಪ್ರದೇಶ ನ್ಯಾಯಾಲಯ ಸಮನ್ಸ್ ಜ್ಯಾರಿ ಗೊಳಿಸಿದೆ. ಅಂದು ಬಿಜೆಪಿ ಜಿಲ್ಲಾ  ಉಪಾಧ್ಯಕ್ಷರಾಗಿದ್ದ ವಿಜಯ್ ಮಿಶ್ರಾ ಅವರು ರಾಹುಲ್ ಗಾಂಧಿ ವಿರುದ್ಧ ದೂರು ನೀಡಿದ್ದರು.

ಮುಂಬೈನ ವಿಶೇಷ ಸಿಬಿಐ ನ್ಯಾಯಾಲಯ, ೨೦೦೫ರಲ್ಲಿ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ ಅಮಿತ್ ಶಾರನ್ನು ಬಿಡುಗಡೆ ಮಾಡಿತ್ತು. ಪ್ರಾಮಾಣಿಕ ಮತ್ತು ಸ್ವಚ್ಛ ರಾಜಕಾರಣದಲ್ಲಿ ನಂಬಿಕೆ ಇದೆ  ಎಂದು ಹೇಳುತ್ತಿರುವ ಪಕ್ಷ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರು ವವರನ್ನು ಪಕ್ಷದ ಅಧ್ಯಕ್ಷರನ್ನಾಗಿ ನೇಮಿಸಿತ್ತು ಎಂದು ರಾಹುಲ್ ಗಾಂಧಿ ಹೇಳುವ ಮೂಲಕ ಅಮಿತ್ ಶಾರನ್ನು ಕೊಲೆಗಾರ ಎಂಬ ರೀತಿಯ ಆಕ್ಷೇಪಾರ್ಹಕಾರಿ ಹೇಳಿಕೆ ನೀಡಿದ್ದರು. ಈ ಬಗ್ಗೆ ನೀಡಲಾದ ದೂರಿನಂತೆ ೨೦೧೮ ಆಗಸ್ಟ್ ೪ರಂದು ಉತ್ತರ ಪ್ರದೇಶದ ಸುಲ್ತಾನ್ ಪುರ ಜಿಲ್ಲೆ ಮತ್ತು ಸತ್ರ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲಾಗಿತ್ತು. 

You cannot copy contents of this page