ಅಸ್ವಸ್ಥ ಸ್ಥಿತಿಯಲ್ಲಿ ರಸ್ತೆ ಬದಿ ಪತ್ತೆಯಾದ ವ್ಯಕ್ತಿ ಆಸ್ಪತ್ರೆಯಲ್ಲಿ ನಿಧನ
ಮಂಜೇಶ್ವರ: ರಸ್ತೆ ಬದಿ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿ ಚಿಕಿತ್ಸೆಯಲ್ಲಿದ್ದ ವ್ಯಕ್ತಿ ನಿಧನರಾದರು. ಕಣ್ವತೀರ್ಥ ರಾಮಾಡಿ ರಾಮ ಭಜನಾ ಮಂದಿರ ಬಳಿಯ ನಿವಾಸಿ ಅಮರ್‌ನಾಥ ದೇವಾಡಿಗ (52) ನಿಧನ ಹೊಂದಿದವರು. ಒಬ್ಬಂಟಿಯಾಗಿ ವಾಸಿಸುತ್ತಿದ್ದ ಇವರು ಈ ತಿಂಗಳ 6ರಂದು ತಲಪಾಡಿಯ ರಸ್ತೆ ಬದಿಯಲ್ಲಿ ಅಸ್ವಸ್ಥ ಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಗುರುತು ಪತ್ತೆಯಾಗದ ಹಿನ್ನೆಲೆಯಲ್ಲಿ ಸ್ಥಳೀಯರು ಅವರನ್ನು ಮಂಗಲ್ಪಾಡಿ ತಾಲೂಕು ಆಸ್ಪತ್ರೆಗೆ ಹಾಗೂ ಅಲ್ಲಿಂದ ಪರಿಯಾರಂ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಿದ್ದರು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದರು. ಮೃತರು ಪತ್ನಿ ರಂಜಿನಿ, ಮಕ್ಕಳಾದ ಸುಶಾಂತ್, ಧನುಷ್, ಮೂರು ಮಂದಿ ಸಹೋದರಿಯರು, ಓರ್ವ ಸಹೋದರ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮಂಜೇಶ್ವರ ಪೊಲೀಸರ ನೇತೃತ್ವದಲ್ಲಿ ಪರಿಯಾರಂ ಮೆಡಿಕಲ್ ಕಾಲೇಜಿನಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಸಂಬAಧಿಕರಿಗೆ ಮೃತದೇಹ ಬಿಟ್ಟುಕೊಡಲಾಗಿದೆ. ತಲಪಾಡಿ ಸಾರ್ವಜನಿಕ ಸ್ಮಶಾನದಲ್ಲಿ ಅಂತ್ಯಸAಸ್ಕಾರ ನಡೆಸಲಾಯಿತು.