ಆಟೋರಿಕ್ಷಾದಲ್ಲಿ ಗಾಂಜಾ ಪತ್ತೆ: ಓರ್ವ ಸೆರೆ
ಕಾಸರಗೋಡು: ಅಬಕಾರಿ ತಂಡ ನಡೆಸಿದ ಕಾರ್ಯಾಚರಣೆಯಲ್ಲಿ ಆಟೋರಿಕ್ಷಾ ದಲ್ಲಿ ಬಚ್ಚಿಡಲಾಗಿದ್ದ ೫೦ ಗ್ರಾಂ ಗಾಂಜಾ ಪತ್ತೆಹಚ್ಚಲಾಗಿದೆ. ಇದಕ್ಕೆ ಸಂಬಂಧಿಸಿ ಶಿರಿಬಾಗಿಲು ಪೆರಿಯಡ್ಕ ನಿವಾಸಿ ಶಿಹಾಬುದ್ದೀನ್ (40) ಎಂಬಾತನನ್ನು ಅಬಕಾರಿ ತಂಡ ಬಂಧಿಸಿದೆ. ಕಾಸರಗೋಡು ರೇಂಜ್ ಎಕ್ಸೈಸ್ ಇನ್ಸ್‌ಪೆಕ್ಟರ್ ಜೋಸೆಫ್ ಜೆ.ಯವರ ನೇತೃತ್ವದಲ್ಲಿ ಅಸಿಸ್ಟೆಂಟ್ ಎಕ್ಸೈಸ್ ಇನ್ಸ್‌ಪೆಕ್ಟರ್ ಕೆ.ವಿ. ಮುರಳಿ, ಪ್ರಿವೆಂಟಿವ್ ಆಫೀಸರ್ ಕೆ.ಆರ್. ಪ್ರಜಿತ್, ಸಿವಿಲ್ ಎಕ್ಸೈಸ್ ಆಫೀಸರ್‌ಗಳಾದ ಮಂಜುನಾಥನ್ ವಿ, ರಾಜೇಶ್ ಪಿ, ಸೋನು ಸೆಬಾಸ್ಟಿಯನ್, ಅತುಲ್ ಟಿ.ವಿ. ಎಂಬಿವರನ್ನೊಳಗೊಂಡ ಅಬಕಾರಿ ತಂಡ ಈ ಕಾರ್ಯಾಚರಣೆ ನಡೆಸಿದೆ.