ಆನೆಗುಂದಿ ಶ್ರೀಗಳವರ ಜನ್ಮ ವರ್ಧಂತ್ಯುತ್ಸವ: ವಿವಿಧ ಕಾರ್ಯಕ್ರಮ

ಪಡುಕುತ್ಯಾರು: ಹುಟ್ಟು ಸಾವಿನ ನಡುವಿನ ನಮ್ಮ ಜೀವನದ ಅವಧಿ ಯಲ್ಲಿ ಭಗವಂತನ ಅನುಗ್ರಹದೊಂದಿಗೆ ಸನ್ನಡತೆ, ಸತ್ಕಾರ್ಯ, ಉತ್ತಮ ನುಡಿಯ ಮೂಲಕ ಬದುಕಿನಲ್ಲಿ ಸ್ವರ್ಗವನ್ನು ಕಾಣಲು ಸಾಧ್ಯ.ನಮ್ಮಿಂದ ಇನ್ನೊಬ್ಬರ ಬದುಕಿನಲ್ಲಿ ಸಂತಸ ಮೂಡಿದರೆ ಅದುವೇ ಬದುಕಿನ ಅತ್ಯಂತ ಸುಂದರ ಸಂತಸದ ಕ್ಷಣಗಳು ಎಂದು ಶ್ರೀಮದ್ ಜಗದ್ಗುರು ಆನೆಗುಂದಿ ಮಹಾ ಸಂಸ್ಥಾನ ಸರಸ್ವತಿ ಪೀಠದ ಜಗದ್ಗುರು ಅನಂತಶ್ರೀವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಸ್ವಾಮೀಜಿ ಹೇಳಿದರು.
ಪಡುಕುತ್ಯಾರಿನಲ್ಲಿ ನಿನ್ನೆ ನಡೆದ ತಮ್ಮ 20ನೇ ಚಾತುರ್ಮಾಸ್ಯದ ಅಂಗವಾಗಿ ಜನ್ಮವರ್ಧಂತ್ಯುತ್ಸವ ಧರ್ಮ ಸಂಸತ್‌ನಲ್ಲಿ ಆಶೀರ್ವಚನ ನೀಡಿದರು.
ಮಹಾಸಂಸ್ಥಾನ ಆಸ್ಥಾನ ವಿದ್ವಾಂಸ ಪಂಜ ಭಾಸ್ಕರ ಭಟ್ ವಿಶೇಷ ಉಪನ್ಯಾಸ ನೀಡಿದರು. ದೇಶ, ದೇಶದ ಭವಿಷ್ಯ, ಜನತೆ ಮತ್ತು ಸಮಾಜದ ಹಿತಕ್ಕಾಗಿ ನಿರಂತರ ಕ್ರಿಯಾ ಶೀಲ ಚಟುವಟಿಕೆ ನಿರತರಾಗಿರುವ ಕಾಳಹಸ್ತೇಂದ್ರ ಶ್ರೀಗಳು ಸಮಾಜದ ಅಭ್ಯದಯಕ್ಕಾಗಿ ನಡೆಸುತ್ತಿರುವ ಸೇವಾ ಕಾರ್ಯಗಳು ಸರ್ವರಿಗೂ ಅನುಕರಣೀ ಯವಾಗುವಂತದ್ದಾಗಿದೆ. ಅಂತಹ ಯತಿಗಳನ್ನು ಗೌರವಿಸಬೇ ಕಾಗಿರುವುದು ನಮ್ಮ ಕರ್ತವ್ಯ ಎಂದರು. ವಿದ್ವಾನ್ ಹಿರಣ್ಯ ವೆಂಕಟೇಶ ಭಟ್ ಮಾತ ನಾಡಿದರು.
ಪ್ರತಿಷ್ಠಾನ ಅಧ್ಯಕ್ಷ ವಿ. ಶ್ರೀಧರ ಆಚಾರ್ಯ ವಡೇರಹೋಬಳಿ ಅಧ್ಯಕ್ಷತೆ ವಹಿಸಿದ್ದರು. ಕೆ. ಎಂ. ಗಂಗಾಧರ ಆಚಾರ್ಯ ಕೊಂಡೆವೂರು ಬಂಗ್ರಮAಜೇಶ್ವರ, ನ್ಯಾಯವಾದಿ ಕೆ. ಪ್ರಭಾಕರ ಆಚಾರ್ಯ ಕೋಟೆಕಾರು ಮಧೂರು, ಜನಾರ್ಧನ ಆಚಾರ್ಯ ಅರಿಕ್ಕಾಡಿ, ಮೋಹನ್ ಕುಮಾರ್ ಬೆಳ್ಳೂರು ಸಹಿತ ಹಲವರು ಉಪಸ್ಥಿತ ರಿದ್ದರು. ಐ ಲೋಲಾಕ್ಷ ಶರ್ಮ ಪ್ರಾಸ್ತವಿಕವಾಗಿ ಮಾತನಾಡಿದರು. ಪ್ರಧಾನ ಕಾರ್ಯದರ್ಶಿ ಲೋಕೇಶ್ ಎಂ. ಬಿ. ಆಚಾರ್ ಕಂಬಾರ್ ಸ್ವಾಗತಿಸಿ ದರು. ಕೋಶಾಧಿಕಾರಿ ಅರವಿಂದ ವೈ ಆಚಾರ್ಯ ವಂದಿಸಿದರು. ಗೀತಾ ಚಂದ್ರ ಆಚಾರ್ಯ ಕಾರ್ಕಳ ನಿರೂಪಿಸಿದರು. ಜನ್ಮವರ್ಧಂತಿ ಅಂಗ ವಾಗಿ ಶ್ರೀ ಗಣೇಶ ಅಥರ್ವಶಿರ್ಷ ಹೋಮ, ಪೂರ್ಣಮಾನ ನವಗ್ರಹ ಹೋಮ, ಶತರುದ್ರ ಯಾಗ, ಮಹಾಮೃತ್ಯುಂಜಯ ಹೋಮ, ಶ್ರೀ ಧನ್ವಂತರೀ ಹೋಮ, ಶ್ರೀ ಮಹಾ ಸರಸ್ವತೀ ಯಜ್ಞ ವೈದಿಕ ಕಾರ್ಯಕ್ರಮಗಳು ಜರಗಿತು.

Leave a Reply

Your email address will not be published. Required fields are marked *

You cannot copy content of this page