ಆನೆಗುಂದಿ ಶ್ರೀಗಳ ಪಟ್ಟಾಭಿಷೇಕ ವರ್ಧಂತಿ ರಾಷ್ಟ್ರೀಯ ವಿಚಾರ ಸಂಕಿರಣ ಸಿದ್ಧತೆ
ಪಡುಕುತ್ಯಾರು: ಇಲ್ಲಿನ ಜಗದ್ಗುರು ಆನೆಗುಂದಿ ಮಹಾ ಸಂಸ್ಥಾನ ಸರಸ್ವತೀ ಪೀಠಾಧೀಶ್ವರ ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಸ್ವಾಮೀಜಿ ಯವರ 14ನೇ ವರ್ಷದ ಪಟ್ಟಾಭಿಷೇಕ ಮಹೋತ್ಸವದ ವರ್ಧಂತ್ಯುತ್ಸವ ಜೂನ್ 1, 2 ರಂದು ಪಡುಕುತ್ಯಾರಿನ ಮಹಾಸಂಸ್ಥಾನದಲ್ಲಿ ನಡೆಯಲಿದೆ.
ಜೂನ್ 1 ರಂದು ವರ್ಧಂತಿ ಉತ್ಸವದ ಅಂಗವಾಗಿ ಸಾಮೂಹಿಕ ಚಂಡಿಕಾಯಾಗ ವೈದಿಕ ಕಾರ್ಯ ಕ್ರಮಗಳು, ಧಾರ್ಮಿಕ ಸಭೆ, ವಾಸ್ತುಶಿಲ್ಪ ಮತ್ತು ಶಿಲ್ಪ ಕಲೆ ಸಾಧಕರಿಗೆ ರಾಷ್ಟ್ರೀಯ ಪ್ರಶಸ್ತಿ ಪ್ರಧಾನ, ಸಾಧಕರಿಗೆ ಆನೆಗುಂದಿ ಶ್ರೀ ಪ್ರಶಸ್ತಿ ಪ್ರಧಾನ,ಯುವಶಿಲ್ಪಿಗಳಿಗೆ ಅಭಿನಂದನೆ ನಡೆಯಲಿದೆ.
2ರಂದು ‘ವಿಶ್ವಕರ್ಮ ಸಾಂಸ್ಕೃತಿಕ ಪರಂಪರೆಯ ನಿರ್ಮಾತೃ ಇತಿಹಾಸದ ಪುನರಾವಲೋಕನ ಭವಿಷ್ಯದ ಅನಾವರಣ’ ಎಂಬ ರಾಷ್ಟ್ರೀಯ ವಿಚಾರ ಸಂಕಿರಣ ನಡೆಯಲಿದೆ. ಕರ್ನಾಟಕ, ಕೇರಳ, ತಮಿಳುನಾಡು, ಗೋವಾ, ಆಂಧ್ರ ಪ್ರದೇಶ,ಹಿಮಾಚಲ ಪ್ರದೇಶ, ಮಣಿಪುರ ಗುಜರಾತ್, ಪಂಜಾಬ್ ಹಾಗೂ ರಾಜಸ್ಥಾನ ಎಂಬಿ ರಾಜ್ಯಗಳಿಂದ ಸಂಪನ್ಮೂಲ ವ್ಯಕ್ತಿಗಳು ಹಾಗೂ ಪ್ರತಿನಿಧಿಗಳು ಭಾಗವ ಹಿಸಲಿದ್ದಾರೆ.