ಆರಾಧನಾಲಯಗಳು ಬ್ರಹ್ಮಕಲಶೋತ್ಸವದ ಮೂಲಕ ಪುನರುತ್ಥಾನವಾದಾಗ ಸಮಾಜ ಸುಭೀಕ್ಷ- ಸುಂದರಿ ಆರ್. ಶೆಟ್ಟಿ

ಉಪ್ಪಳ: ದೈವಕ್ಷೇತ್ರ, ದೇಗುಲಗಳು ಬ್ರಹ್ಮಕಲಶೋತ್ಸವದ ಮೂಲಕ ಪುನರುತ್ಥಾನವಾದಾಗ ಸಮಾಜ ಸುಭಿಕ್ಷವಾಗಲಿದೆ ಎಂದು ಮೀಂಜ ಪಂಚಾಯತ್ ಅಧ್ಯಕ್ಷೆ ಸುಂದರಿ ಆರ್. ಶೆಟ್ಟಿ ನುಡಿದರು. ಅವರು ಸಂತಡ್ಕ ಶ್ರೀ ಅರಸು ಸಂಕಲ ದೈವ ಕ್ಷೇತ್ರದಲ್ಲಿ ನಡೆಯುತ್ತಿರುವ ಶ್ರೀ ದೈವಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವದ ಸಬೆsಯನ್ನು ದೀಪ ಬೆಳಗಿಸಿ ಉದ್ಘಾ ಟಿಸಿ, ಮಾತನಾಡಿದರು.  ಸಂತಡ್ಕ ಶ್ರೀ ಅರಸು ಸಂಕಲ ದೈವ ಕ್ಷೇತ್ರ ಆಡಳಿತ ಟ್ರಸ್ಟ್ನ ಅಧ್ಯಕ್ಷ ಡಾ. ಎಂ ಶ್ರೀಧರ ಭಟ್ ಅಧ್ಯಕ್ಷತೆ ವಹಿಸಿದರು. ಮಾನವ ಹಕ್ಕುಗಳ ಆಯೋಗದ ಸದಸ್ಯ ಟಿ. ಶ್ಯಾಮ್ ಭಟ್, ಕೇರಳ ತುಳು ಅಕಾಡಮಿ ಅಧ್ಯಕ್ಷ ಕೆ.ಆರ್ ಜಯಾನಂದ, ಧಾರ್ಮಿಕ ಮುಂದಾಳು ಮಂಜು ನಾಥ್ ಆಳ್ವ ಮಡ್ವ, ವರ್ಕಾಡಿ ಶ್ರೀ ಮಡಿಕತ್ತಾಯ ಕ್ಷೇತ್ರದ ಗಡಿ ಪ್ರಧಾನರಾದ ದೇವಪ್ಪ ಮಾಸ್ಟರ್ ಚಾವಡಿಬೈಲು, ಮುಳಿಂಜ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಧ್ಯಕ್ಷ ಹರಿನಾಥ ಭಂಡಾರಿ ಮುಳಿಂಜ, ಧಾರ್ಮಿಕ ಮುಂ ದಾಳು ಗೋಪಾಲ ಶೆಟ್ಟಿ ಅರಿಬೈಲು, ಜಿಲ್ಲಾ ವಿದ್ಯಾಧಿಕಾರಿ ದಿನೇಶ್.ವಿ, ಹರಿಶ್ಚಂದ್ರ ಶೆಟ್ಟಿಗಾರ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಂಜೇಶ್ವರ ತಾಲೂಕು ಯೋಜನಾಧಿಕಾರಿ ಶಶಿಕಲಾ ಸುವರ್ಣ, ಜಿತೇಂದ್ರ ಕಟ್ಟೆಬಜಾರ್, ವೇಣುಗೋಪಾಲ ಶೆಟ್ಟಿ, ಉದ್ಯಮಿ ಜಗದೀಶ್ ಸುವರ್ಣ ಬೇಕೂರು, ಮೀಯಪದವು ಶ್ರೀ ಅಯ್ಯಪ್ಪ ಭಜನಾ ಮಂದಿರದ ಅಧ್ಯಕ್ಷ ಶ್ರೀಧರ ರಾವ್ ಆರ್.ಎಂ, ಉದ್ಯಾವರ ಮಾಡ ಶ್ರೀ ಅರಸು ಮಂಜೀಷ್ಣಾರ್ ದೈವಗಳ ಕ್ಷೇತ್ರದ ಆಡಳಿತ ಮಂಡಳಿ ಅಧ್ಯಕ್ಷ ಕಿರಣ್ ಶೆಟ್ಟಿ ಮಾಡ, ಮಂಜೇಶ್ವರ ಬ್ಲಾಕ್ ಪಂಚಾಯತ್ ಸದಸ್ಯೆ ಅಶ್ವಿನಿ ಎಂ.ಎಲ್ ಪಜ್ವ, ಮೀಂಜ ಪಂಚಾ ಯತ್ ಸದಸ್ಯ ಜನಾರ್ದನ ಪೂಜಾರಿ ಕುಳೂರು ಶುಭಾಸಂಶನೆಗೈದರು. ಈ ವೇಳೆ ಕ್ಷೇತ್ರದ ಬಗ್ಗೆ ನಿರ್ಮಿಸಿದ ತುಳು ಭಕ್ತಿ ಗೀತೆ “ಇರ್ವೇರು ಅರಸು ಸಂಕಲ ಮಾಡ” ಆಲ್ಬಂ ಸಾಂಗ್‌ನ್ನು ಕೇರಳ ತುಳು ಅಕಾಡಮಿ ಅಧ್ಯಕ್ಷ ಕೆ.ಆರ್. ಜಯಾನಂದ ಬಿಡುಗಡೆಗೊಳಿಸಿದರು. ಬಾಲಕೃಷ್ಣ ಆಚಾರ್ಯ, ಬಾಲಕೃಷ್ಣ ಶೆಟ್ಟಿ, ಕಳೆದ 24 ವರ್ಷಗಳಿಂದ ಕ್ಷೇತ್ರದ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಕೊಡುಗೆಯಾಗಿ ನೀಡುತ್ತಿರುವ ದಯಾನಂದ ಮಾಡ, ಆನಂದ ಶೆಟ್ಟಿಗಾರ್, ಹರಿಕಥಾ ಸೇವೆಯನ್ನು ಸಲ್ಲಿಸುತ್ತಿರುವ ಈಶ್ವರ ನಾಯ್ಕ, ಕ್ಷೇತ್ರದ ಜೀರ್ಣೋದ್ಧಾರ ಕಾರ್ಯದಲ್ಲಿ ಹಗಲಿರುಳು ಶ್ರಮಿಸುತ್ತಿ ರುವ ತತ್ವಮಸಿ ಮೀಯಪದವು ಸಂಸ್ಥೆ ಯವರನ್ನು ಸನ್ಮಾನಿಸಿದರು. ಟೀಮ್ ಗರುಡ ಸಂಸ್ಥೆಯ ಲೋಗೋ ಅನಾ ವರಣ ನಡೆಯಿತು. ಕ್ಷೇತ್ರದ ಉಪಾಧ್ಯಕ್ಷ ಅರವಿಂದಾಕ್ಷ ಭಂಡಾರಿ ದಡ್ಡಂಗಡಿ ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿ, ಕಾರ್ಯದರ್ಶಿ ಜಯಪ್ರಕಾಶ್ ಶೆಟ್ಟಿ ಅಂಗಡಿದಾರು ನಿರೂಪಿಸಿ, ಪ್ರಧಾನ ಕಾರ್ಯದರ್ಶಿ ರಾಮಕೃಷ್ಣ ಸಂತಡ್ಕ ವಂದಿಸಿದರು. ಬಳಿಕ ಟೀಮ್ ಗರುಡ ಸಂತಡ್ಕ ಪ್ರಾಯೋಜಕತ್ವದಲ್ಲಿ ಸ್ಥಳೀಯ ಪ್ರತಿಭೆಗಳ ನೃತ್ಯ ವೈವಿಧ್ಯ ಕಾರ್ಯಕ್ರಮ ನಡೆಯಿತು.

Leave a Reply

Your email address will not be published. Required fields are marked *

You cannot copy content of this page