ಆರ್ಯಭಟ ಪ್ರಶಸ್ತಿ ವಿಜೇತ ಕೆ.ಕೆ. ಶೆಟ್ಟಿಯವರಿಗೆ ಸೀತಾಂಗೋಳಿಯಲ್ಲಿ ಸಾರ್ವಜನಿಕ ಅಭಿನಂದನೆ

ಕಾಸರಗೋಡು: ಕರ್ನಾಟಕ ಸರಕಾರದ 2024ರ ಪ್ರತಿಷ್ಠಿತ ಆರ್ಯಭಟ ಪ್ರಶಸ್ತಿಗೆ ಆಯ್ಕೆಯಾದ, ಧಾರ್ಮಿಕ, ಸಾಮಾಜಿಕ ರಂಗದಲ್ಲಿ ಸಕ್ರಿಯವಾಗಿರುವ ಕೆ.ಕೆ.ಶೆಟ್ಟಿಯವರಿಗೆ ಸೀತಾಂಗೋಳಿಯ ಅಲೆಯನ್ಸ್ ಸಭಾಂಗಣದಲ್ಲಿ ಜು.13ರಂದು ನಡೆಯಲಿರುವ ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಕೆಯುಡಬ್ಲೂ÷್ಯಜೆ ಕಾಸರಗೋಡು ಜಿಲ್ಲಾ ಘಟಕ ಆಶ್ರಯದಲ್ಲಿ ನಡೆಯುವ ದತ್ತಿನಿದಿs ಪ್ರಶಸ್ತಿ ಸಮಾರಂಭದಲ್ಲಿ ಸಾರ್ವಜನಿಕ ಅಭಿನಂದನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಕರ್ನಾಟಕ ವಿಧಾನಸಭೆ ಸಭಾಧ್ಯಕ್ಷ ಯು.ಟಿ.ಖಾದರ್, ಕರ್ನಾಟಕ ರಾಜ್ಯ ಅರಣ್ಯ ಸಚಿವ ಈಶ್ವರ ಖಂಡ್ರೆ, ಉಪಸಭಾಪತಿ ಎಂ.ಕೆ. ಪ್ರಾಣೇಶ್, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ ವಿ ಪ್ರಭಾಕರ ಸಹಿತ ಗಣ್ಯರು ಭಾಗವಹಿಸುವರು.
ಕೆ.ಕೆ.ಶೆಟ್ಟಿಯವರು ಜಿಲ್ಲೆಯ ವಿವಿಧ ದೇವಸ್ಥಾನ, ದೈವಸ್ಥಾನಗಳ ಜೀರ್ಣೋದ್ಧಾರಗಳಲ್ಲಿ ತೊಡಗಿಸಿಕೊಂಡಿದ್ದಲ್ಲದೆ ಮುಂಡಪಳ್ಳ ಶ್ರೀ ರಾಜರಾಜೇಶ್ವರಿ ಕ್ಷೇತ್ರವನ್ನು ಸಂಪೂರ್ಣ ಪುನರ್ ನಿರ್ಮಾಣದ ಮತ್ತು ಬ್ರಹ್ಮಕಲಶದ ಜವಾಬ್ದಾರಿಯನ್ನು ಹೊಂದಿದ್ದರು. ಇದೀಗ ಶ್ರೀ ಕ್ಷೇತ್ರದ ಆಡಳಿತ ಮೊಕ್ತೇಸರರಾಗಿದ್ದಾರೆ. ಇದಲ್ಲದೇ ಅಹಮ್ಮದ್‌ನಗರದ ಶ್ರೀ ಅಯ್ಯಪ್ಪನ್ ದೇವಸ್ಥಾನದ ನಿರ್ಮಾಣ, ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ಕ್ಷೇತ್ರ ಹೀಗೆ ಆನೇಕ ಕಡೆ ಧಾರ್ಮಿಕ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ. ಕಲೆಗೂ ಪ್ರೋತ್ಸ್ಸಾಹ ನೀಡುವ ಮೂಲಕ ಯಕ್ಷದ್ರುವ ಪಟ್ಲ ಫೌಂಡೇಶನ್‌ನ ಕುಂಬಳೆ ಘಟಕದ ಅಧ್ಯಕ್ಷರಾಗಿದ್ದಾರೆ.

Leave a Reply

Your email address will not be published. Required fields are marked *

You cannot copy content of this page