ಇಲಿವಿಷ ಸೇವಿಸಿ ಚಿಕಿತ್ಸೆಯಲ್ಲಿದ್ದ ಯುವತಿ ಮೃತ್ಯು
ಕಾಸರಗೋಡು: ಇಲಿ ವಿಷ ಸೇವಿಸಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಯುವತಿ ಮೃತಪಟ್ಟಳು.
ಕೊಡಕ್ಕಾಡ್ ಕಣ್ಣಂಕೈ ನಿವಾಸಿ ಪವಿತ್ರನ್-ಸಿಡಿಎಸ್ ಚೆಯರ್ ಪರ್ಸನ್ ಪಿ. ಶಾಂತ ದಂಪತಿಯ ಪುತ್ರಿ ಶಿಲ್ಪ (25) ಮೃತ ಯುವತಿ. ಈ ತಿಂಗಳ 21ರಂದು ಮಧ್ಯಾಹ್ನ ಮನೆಯಲ್ಲಿ ಇಲಿವಿಷ ಸೇವಿಸಿದ ಸ್ಥಿತಿಯಲ್ಲಿ ಶಿಲ್ಪ ಪತ್ತೆಯಾಗಿದ್ದಳು. ಗಂಭೀರ ಸ್ಥಿತಿಯಲ್ಲಿದ್ದ ಈಕೆಯನ್ನು ಪರಿಯಾರಂ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ದಾಖಲಿಸ ಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಮೃತಪಟ್ಟಳು. ಚೀಮೇನಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.