ಇವಿಎಂ ಬಗ್ಗೆ ಸುಳ್ಳು ಪ್ರಚಾರ ಮಾಡುವವರ ವಿರುದ್ಧ ಕಠಿಣ ಕ್ರಮ-ಜಿಲ್ಲಾಧಿಕಾರಿ
ಕಾಸರಗೋಡು: ಲೋಕಸಭಾ ಕ್ಷೇತ್ರದಲ್ಲಿ ಇವಿಎಂ ಬಗ್ಗೆ ತಪ್ಪು ಮಾಹಿತಿ ನೀಡುವ ಆಡಿಯೋ ಸಂದೇಶಗಳು ಹರಿದಾಡುತ್ತಿರುವುದು ಗಮನಕ್ಕೆ ಬಂದಿದ್ದು, ಅಂತಹವರ ವಿರುದ್ಧ ಕಾನೂನು ಕ್ರಮಗಳನ್ನು ಕೈಗೊಳ್ಳ ಲಾಗುವುದು ಎಂದು ಕಾಸರಗೋಡು ಲೋಕಸಭಾ ಕ್ಷೇತ್ರದ ಚುನಾವಣಾದಿ üಕಾರಿ, ಜಿಲ್ಲಾಧಿಕಾರಿ ಕೆ.ಇಂಬಶೇಖರ್ ತಿಳಿಸಿದ್ದಾರೆ. ಚುನಾವಣಾ ಚಟುವಟಿಕೆ ಗಳಿಗೆ ಧಕ್ಕೆ ತರಲು ಸುಳ್ಳು ಪ್ರಚಾರ ಮಾಡುತ್ತಿದ್ದಾರೆ. ಈ ಧ್ವನಿ ಸಂದೇಶದ ಫೊರೆನ್ಸಿಕ್ ಪರೀಕ್ಷೆಯನ್ನು ನಡೆಸುವಂತೆ ಜಿಲ್ಲಾ ಪೊಲೀಸ್ ಮುಖ್ಯಸ್ಥರಿಗೆ ತಿಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು. ಕಾಸರಗೋಡು ಕ್ಷೇತ್ರದ ಎಲ್ಲಾ ಚುನಾವಣಾ ಚಟುವಟಿಕೆಗಳು ಪಾರದರ್ಶಕವಾಗಿದ್ದು, ಇವಿಎಂ ಬಗೆಗಿನ ಆಧಾರ ರಹಿತ ವದಂತಿಗಳನ್ನು ನಂಬಬಾರದು ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.