ದಿಲ್ಲಿ: ಉತ್ತರ ಭಾರತ ರಾಜ್ಯಗಳಲ್ಲಿ ಭಾರೀ ಮಳೆಯಿಂದಾಗಿ ವ್ಯಾಪಕ ನಾಶ-ನಷ್ಟ ಸಂಭವಿಸಿದೆ. ಉತ್ತರ ಪ್ರದೇಶದ 13 ಜಿಲ್ಲೆಗಳಲ್ಲಿ ನೆರೆಹಾವಳಿ ಉಂಟಾಗಿದೆ. ಗಂಗಾ, ಯಮುನಾ ನದಿಗಳು ಉಕ್ಕಿ ಹರಿಯುತ್ತಿವೆ. ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಹಿಮಾಚಲ ಪ್ರದೇಶದಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದಲ್ಲಿ ಇದುವರೆಗೆಂ 184 ಮಂದಿ ಮಳೆಯಿಂದಾಗಿ ಮೃತಪಟ್ಟಿದ್ದಾರೆ. ನೆರೆ ಹಾಗೂ ಭೂ ಕುಸಿತದಿಂದ 266 ರಸ್ತೆಗಳನ್ನು ಮುಚ್ಚುಗಡೆಗೊಳಿಸಲಾಗಿದೆ. 1700 ಕೋಟಿ ರೂಪಾಯಿಗಳ ನಾಶನಷ್ಟ ಸಂಭವಿಸಿರುವುದಾಗಿ ರಾಜ್ಯ ಸರಕಾರ ತಿಳಿಸಿದೆ. ಉತ್ತರಾಖಂಡ್‌ನಲ್ಲೂ ಮಳೆ ತೀವ್ರಗೊಂಡಿದೆ.