ಉದ್ಯಾವರ ಮಾಡ ಕ್ಷೇತ್ರ ಜಾತ್ರೆ: ಸಾವಿರ ಜಮಾಯತ್ ಮಸೀದಿಗೆ ದೈವಗಳ ಭೇಟಿ

ಮಂಜೇಶ್ವರ: ಇತಿಹಾಸ ಪ್ರಸಿದ್ಧ ಉದ್ಯಾವರ ಶ್ರೀ ಅರಸು ಮಂಜಿಷ್ಣಾರ್ ಅಣ್ಣ ತಮ್ಮ ದೈವಗಳ ಕ್ಷೇತ್ರದ ಜಾತ್ರೆಯ ಪೂರ್ವಭಾವಿಯಾಗಿ ಉದ್ಯಾವರ ಸಾವಿರ ಜಮಾಯತ್ ಮಸೀದಿಗೆ ದೈವಗಳ ಭೇಟಿ ಕಾರ್ಯಕ್ರಮ ನಿನೆÀ್ನ ಸಾಂಪ್ರದಾಯಿಕ ವಾಗಿ ನೆರವೇರಿತು. ಹಿಂದೂ ಮುಸ್ಲಿಂ ಭಾವೈಕ್ಯದ ಸಂಕೇತವಾಗಿ ಕಳೆದ 800 ವರ್ಷಗಳಿಂದ ವಾಡಿಕೆಯಲ್ಲಿರುವ ಉದ್ಯಾವರ ಶ್ರೀ ಅರಸು ದೈವಗಳು ವರ್ಷಂಪ್ರತಿ ಮೇಷ ವÆಸದ ಮೊದಲ ದಿನ ಶುಕ್ರವಾರ ಮಧ್ಯಾಹ್ನ ಅರಸು ದೈವ ಪಾತ್ರಿಗಳು ಮತ್ತು ದೈವಸ್ಥಾನದ ಪ್ರತಿನಿಧಿಗಳು ಹಾಗೂ ಹಿಂದೂ ಬಾಂಧವರು ಉದ್ಯಾವರ ಸಾವಿರ ಜಮಾಯತ್‌ಗೆ ಭೇಟಿ ನೀಡಿದರು. ಉದ್ಯಾವರ ಅರಸು ಮಂಜಿಷ್ಣಾರ್ ಕ್ಷೇತ್ರದ ವಾರ್ಷಿಕ ಜಾತ್ರೋತ್ಸವದ ಅಂಗವಾಗಿ ಆಚರಿಸಿ ಕೊಂಡು ಬರುತ್ತಿರುವ ಅರಸು ದೈವಗಳ ಜಮಾಯತ್ ಭೇಟಿ ಇಂದಿಗೂ ಹಿಂದೂ, ಮುಸ್ಲಿಂ ಭಾವೈಕ್ಯದ ಪ್ರತೀಕವಾಗಿದೆ. ಮಧ್ಯಾಹ್ನ ಉದ್ಯಾವರ ಕ್ಷೇತ್ರದ ಭಂಡಾರ ಮನೆಯಿಂದ ಹೊರಟ ದೈವಗಳು 1.30ರ ಹೊತ್ತಿಗೆ ಜಮಾಯತ್‌ಗೆ ತಲುಪಿದೆ. ಈ ವೇಳೆ ಜುಮಾ ನಮಸ್ಕಾರ ಮುಗಿಸಿ ಸಜ್ಜಾಗಿ ನಿಂತಿದ್ದ ಮಸೀದಿಯ ಆಡಳಿತ ಸಮಿತಿ ಪ್ರತಿನಿಧಿಗಳು ಹಾಗೂ ಮುಸ್ಲಿಂ ಬಾಂಧವರು ಪರಂಪರಾಗತ ರೀತಿಯಲ್ಲಿ ಉದ್ಯಾವರ ಅರಸು ದೈವ ಪಾತ್ರಿಗಳಿಗೆ ಅದ್ದೂರಿ ಸ್ವಾಗತ ನೀಡಿದರು. ಮೇ 8 ರಿಂದ 11 ರ ತನಕ ವಾರ್ಷಿಕ ಬಂಡಿ ಉತ್ಸವ ನಡೆಯಲಿದೆ. ಮೇ ತಿಂಗಳು 14 ರಂದು ಧ್ವಜ ಇಳಿಯುವುದರೊಂದಿಗೆ ಉತ್ಸವ ಕಾರ್ಯಕ್ರಮ ಸಮಾಪ್ತಿಗೊಳ್ಳಲಿದೆ.

RELATED NEWS

You cannot copy contents of this page