ಉಪಚುನಾವಣೆ: ಅಭ್ಯರ್ಥಿ ನಿರ್ಣಯ ಚರ್ಚೆ ಕಾಂಗ್ರೆಸ್‌ನಲ್ಲಿ ಸಕ್ರಿಯ
ತಿರುವನಂತಪುರ: ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ತೆರವುಗೊಂಡ ವಿಧಾನಸಭಾ ಕ್ಷೇತ್ರಗಳ ಉಪಚುನಾ ವಣೆಗೆ ಅಭ್ಯರ್ಥಿಗಳ ನಿರ್ಣಯ ಚರ್ಚೆಯನ್ನು ಕಾಂಗ್ರೆಸ್ ಆರಂಭಿಸಿದೆ.
ಚೇಲಕ್ಕರ, ಪಾಲಕ್ಕಾಡ್ ವಿಧಾನಸಭಾ ಕ್ಷೇತ್ರಗಳು ಹಾಗೂ ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ರಾಹುಲ್ ಗಾಂಧಿ ರಾಜೀನಾಮೆ ನೀಡಿದರೆ ಅಲ್ಲಿಯೂ ಉಪಚುನಾವಣೆ ನಡೆಯಲಿದೆ. ಚೇಲಕ್ಕರ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕನಾಗಿದ್ದ ಕೆ. ರಾಧಾಕೃಷ್ಣನ್ ಲೋಕಸಭಾ ಚುನಾವಣೆಯಲ್ಲಿ ಆಲತ್ತೂರಿನಿಂದ ಗೆಲುವು ಸಾಧಿಸಿದ್ದಾರೆ.
ಪಾಲಕ್ಕಾಡ್ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕನಾಗಿದ್ದ ಶಾಫಿ ಪರಂಬಿಲ್ ವಡಗರ ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ. ಇದರಿಂದ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗಿದೆ. ಲೋಕಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸುವ ಮೊದಲು ಇವರು ಎಂಎಲ್‌ಎ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗಿದೆ. ವಯನಾಡು ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ ರಾಹುಲ್ ಗಾಂಧಿ ರಾಯ್ ಬರೇಲಿ ಲೋಕಸಭಾ ಕ್ಷೇತ್ರದಲ್ಲೂ ಗೆಲುವು ಸಾಧಿಸಿದ್ದಾರೆ. ಈ ಪೈಕಿ ಒಂದು ಮಂಡಲದಲ್ಲಿ ಅವರು ರಾಜೀನಾಮೆ ನೀಡಬೇಕಾಗಿದೆ. ಅದು ವಯನಾಡು ಆಗಿರಲಿದೆಯೆಂದು ಹೇಳಲಾಗುತ್ತಿದೆ. ರಮ್ಯಾ ಹರಿದಾಸ್, ಯೂತ್ ಕಾಂಗ್ರೆಸ್ ರಾಜ್ಯಾಧ್ಯಕ್ಷ ರಾಹುಲ್ ಮಾಂಕುಟ್ಟತ್ತಿಲ್, ಕೆಪಿಸಿಸಿ ಉಪಾಧ್ಯಕ್ಷ ವಿ.ಟಿ. ಬಲ್‌ರಾಂ ಎಂಬಿವರಹೆಸರುಗಳು ಈ ಮಂಡಲಗಳಿಗೆ ಪರಿಗಣನೆಯಲ್ಲಿದೆ.