ಎಡರಂಗ ಸರಕಾರ ಜನರನ್ನು ಸಾಲದ ಕೂಪಕ್ಕೆ ತಳ್ಳಿದೆ- ನಿವೇದಿತಾ ಸುಬ್ರಹ್ಮಣ್ಯ
ಬದಿಯಡ್ಕ: ಕೃಷಿಕರ ಅಭಿವೃದ್ಧಿಗಾಗಿ ಕೇಂದ್ರ ಸರಕಾರ ಅನೇಕ ಯೋಜನೆಗಳನ್ನು ಜ್ಯಾರಿಗೆ ತಂದರೂ ಎಡರಂಗ ನೇತೃತ್ವದ ಕೇರಳ ಸರಕಾರ ಅದನ್ನು ಜನರಿಗೆ ತಲುಪಿಸುವಲ್ಲಿ ಹಿಂದೇಟು ಹಾಕುತ್ತಿದೆ. ಕೇಂದ್ರದ ಯೋಜನೆಯನ್ನು ತನ್ನದೆಂದು ಸಾರಿಕೊಳ್ಳುತ್ತಾ ಜನರನ್ನು ವಂಚಿಸುವ ರಾಜ್ಯ ಸರಕಾರ ಜನರನ್ನು ಸಾಲದ ಕೂಪಕ್ಕೆ ತಳ್ಳಿದೆ ಎಂದು ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷೆ ನಿವೇದಿತಾ ಸುಬ್ರಹ್ಮಣ್ಯ ಹೇಳಿದರು. ಎನ್ಡಿಎ ಬದಿಯಡ್ಕ ಈಸ್ಟ್ ಪಂಚಾಯತ್ ಸಮಿತಿ ನೇತೃತ್ವದಲ್ಲಿ ಬದಿಯಡ್ಕದಲ್ಲಿ ಜರಗಿದ ಜನಪಂಚಾಯತ್ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಬಿಜೆಪಿ ಮುಖಂಡ ನಾರಾಯಣ ಭಟ್ ಅಧ್ಯಕ್ಷತೆ ವಹಿಸಿದ್ದರು. ಮಹಿಳಾ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯೆ ಎಂ.ಎಲ್. ಅಶ್ವಿನಿ ಮಾತನಾಡಿದರು. ಬಿಜೆಪಿ ಮಂಡಲಾಧ್ಯಕ್ಷ ಹರೀಶ್ ನಾರಂಪಾಡಿ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಮಣಿಕಂಠ ರೈ, ಜಿಲ್ಲಾ ಉಪಾಧ್ಯಕ್ಷ ರಾಮಪ್ಪ ಮಂಜೇಶ್ವರಂ, ಮಹಿಳಾಮೋರ್ಚಾ ಜಿಲ್ಲಾಧ್ಯಕ್ಷೆ ಪುಷ್ಪಾ ಗೋಪಾಲನ್, ಎಸ್ಟಿ ಮೋರ್ಚಾ ಜಿಲ್ಲಾಧ್ಯಕ್ಷ ಈಶ್ವರ ಮಾಸ್ತರ್, ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ಮುಂಡೋಳುಮೂಲೆ, ಭಾಸ್ಕರ ಬದಿಯಡ್ಕ, ಪುಷ್ಪಲತಾ, ಜಯಂತಿ ಪಾಲ್ಗೊಂಡಿದ್ದರು. ಅವಿನಾಶ್ ರೈ ಸ್ವಾಗತಿಸಿ, ಬಾಲಕೃಷ್ಣ ಶೆಟ್ಟಿ ವಂದಿಸಿದರು.