ಎನ್.ಟಿ.ಯು ಮಂಜೇಶ್ವರ ಉಪಜಿಲ್ಲಾ ಸಮಿತಿ ವತಿಯಿಂದ ಧರಣಿ
ಮಂಜೇಶ್ವರ: ದೇಶೀಯ ಅಧ್ಯಾಪಕ ಪರಿಷತ್ ಮಂಜೇಶ್ವರ ಉಪಜಿಲ್ಲಾ ಸಮಿತಿ ವತಿಯಿಂದ ಮಂಜೇಶ್ವರ ಸಹಾಯಕ ಶಿಕ್ಷಣಾಧಿಕಾರಿಗಳ ಕಚೇರಿಯ ಮುಂಭಾಗ ಶೈಕ್ಷಣಿಕ ಕ್ಯಾಲೆಂಡರ್ ನ್ನು ವಿರೋಧಿಸಿ ಪ್ರತಿಭಟನಾ ಧರಣಿ ನಡೆಸಲಾಯಿತು.ಎನ್ ಟಿ ಯು ರಾಜ್ಯ ಸಮಿತಿ ಸದಸ್ಯ ಅರವಿಂದಾಕ್ಷ ಭಂಡಾರಿ ಉದ್ಘಾಟಿಸಿ ಮಾತನಾಡಿ ದರು . ರಾಜ್ಯ ಸಮಿತಿ ಸದಸ್ಯ ಸತೀಶ್ ಶೆಟ್ಟಿ ಒಡ್ಡಂಬೆಟ್ಟು, ರಾಜ್ಯ ವನಿತಾ ವಿಂಗ್ ಸದಸ್ಯರಾದ ಸುಚಿತ ಟೀಚರ್ ,ಜಿಲ್ಲಾಸಮಿತಿ ಸದಸ್ಯ ಈಶ್ವರ ಕಿದೂರು, ಉಪಜಿಲ್ಲಾ ಅಧಕ್ಷೆ ಚಂದ್ರಿಕಾ, ಕಾರ್ಯದರ್ಶಿ ದೇವಿಪ್ರ ಸಾದ್ ಮಾತನಾಡಿದರು.ಎನ್. ಟಿ.ಯು ಮಂಜೇಶ್ವರ ಉಪಜಿಲ್ಲಾ ಸದಸ್ಯರು ಧರಣಿಯಲ್ಲಿ ಪಾಲ್ಗೊಂಡರು.