ಎರಡುಕಡೆ ಅಬಕಾರಿ ದಾಳಿ : ಕರ್ನಾಟಕ ಮದ್ಯ ಪತ್ತೆ; ಓರ್ವ ಸೆರೆ
ಕಾಸರಗೋಡು: ಅಬಕಾರಿ ತಂಡ ನಿನ್ನೆ ಎರಡು ಕಡೆ ನಡೆಸಿದ ಕಾರ್ಯಾ ಚರಣೆಯಲ್ಲಿ ಕರ್ನಾಟಕ ನಿರ್ಮಿತ ಮದ್ಯ ಪತ್ತೆಹಚ್ಚಿ ವಶಪಡಿಸಿಕೊಂಡಿದೆ. ಇದಕ್ಕೆ ಸಂಬಂಧಿಸಿ ಓರ್ವನನ್ನು ಬಂಧಿಸಲಾಗಿದೆ.
ಮಧೂರು ಎಂ.ಜಿ.ನಗರದಲ್ಲಿ ಕಾಸರಗೋಡು ಅಬಕಾರಿ ರೇಂಜ್ ಕಚೇರಿಯ ಅಸಿಸ್ಟೆಂಟ್ ಎಕ್ಸೈಸ್ ಇನ್‌ಸ್ಪೆಕ್ಟರ್ ರಾಜೀವನ್ ಎ.ವಿ. ನೇತೃತ್ವದ ತಂಡ ನಡೆಸಿದ ದಾಳಿಯಲ್ಲಿ 24.12 ಲೀಟರ್ ಕರ್ನಾಟಕ ನಿರ್ಮಿತ ಮದ್ಯ ಪತ್ತೆಹಚ್ಚಿ ವಶಪಡಿಸಿಕೊಂಡಿದೆ. ಇದಕ್ಕೆ ಸಂಬಂಧಿಸಿ ಮಧೂರು ಎಂ.ಜಿ ನಗರದ ರಾಜೇಶ್ ಸಿ.ಸಿ. (41) ಎಂಬಾತನನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ. ಕಾಸರಗೋಡು ಇಬಿಯ ಪ್ರಿವೆಂಟೀವ್ ಆಫೀಸರ್ ಬಿ. ಜೋಯನ್‌ರಿಗೆ ಲಭಿಸಿದ ಗುಪ್ತ ಮಾಹಿತಿಯಂತೆ ಈ ದಾಳಿ ನಡೆಸಲಾಗಿದೆ. ದಾಳಿ ನಡೆಸಿದ ತಂಡದಲ್ಲಿ ಸಿಇಒಗಳಾದ ಮೈಮೋಳ್ ಜೋನ್, ಗೀತಾ ಟಿ.ವಿ, ಕಣ್ಣನ್ ಕುಂಞಿ ಟಿ ಮತ್ತು ಅಬ್ದುಲ್ ಅಸೀಸ್ ಎಂಬವರು ಒಳಗೊಂಡಿದ್ದರು. ಬಂಧಿತ ಆರೋಪಿಯನ್ನು ನಂತರ ನ್ಯಾಯಾಲಯದ ನಿರ್ದೇಶ ಪ್ರಕಾರ ನ್ಯಾಯಾಂಗ ಬಂಧನದಲ್ಲಿರಿಸಲಾಗಿದೆ.
ಇದೇ ರೀತಿ ಇದೇ ತಂಡ ಮಧೂರು ಎಂ.ಜಿ ನಗರದಲ್ಲಿ ನಡೆಸಿದ ಇನ್ನೊಂದು ಕಾರ್ಯಾಚರಣೆಯಲ್ಲಿ ೨೪.೧೨ ಲೀಟರ್ ಕರ್ನಾಟಕ ನಿರ್ಮಿತ ಮದ್ಯ ಪತ್ತೆಹಚ್ಚಿ ವಶಪಡಿಸಿ ಕೊಂಡಿದೆ. ಆದರೆ ಈ ಮಾಲು ಇರಿಸಿ ದವರನ್ನು ಪತ್ತೆಹಚ್ಚಲು ಸಾಧ್ಯವಾಗಿಲ್ಲ. ಅಬಕಾರಿ ತಂಡ ಈ ಬಗ್ಗೆ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದೆ.